ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಕಾಡಿನಿಂದ ನಾಡಿಗೆ ಆಗಮಿಸಿರುವ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ದಸರಾ ಗಜಪಡೆಗೆ ಇಂದಿನಿಂದ ತಾಲೀಮು ಆರಂಭಿಸಲಾಗಿದೆ.
ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ದಸರಾ ಗಜಪಡೆಗಳು ಮೊದಲ ದಿನವಾದ ಇಂದು ರಾಜಬೀದಿಗಳಲ್ಲಿ ಗಜ ಗಾಂಭೀರ್ಯದಿಂದ ಹೆಜ್ಜೆ ಹಾಕಿವೆ. ಮೈಸೂರು ಅರಮನೆಯಿಂದ ಬನ್ನಿಮಂಟಪದವರೆಗೆ ದಸರಾ ಗಜಪಡೆಗಳಿಗೆ ತಾಲೀಮು ಆರಂಭಿಸಲಾಗಿದೆ. ಪ್ರತಿನಿತ್ಯ ಬೆಳಿಗ್ಗೆ ಮತ್ತು ಸಂಜೆ ವೇಳೆ ದಸರಾ ಗಜಪಡೆ ವಾಕಿಂಗ್ ಮಾಡಲಿವೆ.
ಮೊದಲ ಹಂತದಲ್ಲಿ ಕಾಡಿನಿಂದ ಮೈಸೂರು ಅರಮನೆಗೆ 9 ಆನೆಗಳು ಆಗಮಿಸಿದ್ದು, ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ ತಾಲೀಮು ಆರಂಭಿಸಲಾಗಿದೆ. ಜಂಬೂಸವಾರಿ ದಿನದಂದು ಯಾವುದೇ ತೊಂದರೆಯಾಗದಿರಲಿ ಎಂದು ದಸರಾ ಗಜಪಡೆಗೆ ತಾಲೀಮು ನಡೆಸಲಾಗುತ್ತಿದ್ದು, ಪ್ರತಿ ದಿನ ಬೆಳಿಗ್ಗೆ ಹಾಗೂ ಸಂಜೆ ಅರಮನೆಯಿಂದ ಬನ್ನಿಮಂಟಪದವರೆಗೆ 5 ಕಿ.ಮೀ ತಾಲೀಮು ನಡೆಯಲಿದೆ.