Mysore
27
overcast clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಪ್ರಾಸಿಕ್ಯೂಷನ್ :ಸಿಎಂ ಸಿದ್ದರಾಮಯ್ಯಗೆ ಸ್ವಾಮೀಜಿಗಳ ಬೆಂಬಲ

ಬೆಂಗಳೂರು: ಹಿಂದುಳಿದ ವರ್ಗ, ದಲಿತ ಹಾಗೂ ಶೋಷಿತ ಸಮುದಾಯಗಳ ಸ್ವಾಮೀಜಿಗಳ ಒಕ್ಕೂಟ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ತಮ್ಮ ಬೇಷರತ್ ನೈತಿಕ ಬೆಂಬಲ ಘೋಷಿಸಿದರು.

ಕೃತಕವಾಗಿ ಸರ್ಕಾರವನ್ನು ಅಸ್ಥಿರಗೊಳಿಸುವ ಕೇಂದ್ರ ಸರ್ಕಾರದ ಮತ್ತು ರಾಜಭವನದ ಷಡ್ಯಂತ್ರಗಳನ್ನು ತೀವ್ರವಾಗಿ ಖಂಡಿಸಿದ ಸ್ವಾಮೀಜಿಗಳು ಈ ಷಡ್ಯಂತ್ರದ ವಿರುದ್ಧ ಒಕ್ಕೋರಲಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ನಿಂತು ಹೋರಾಟ ನಡೆಸುವುದಾಗಿ ಘೋಷಿಸಿದರು.

ನಿಯೋಗದಲ್ಲಿದ್ದ ಸ್ವಾಮೀಜಿಗಳು…
ಜಗದ್ಗುರು ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಜಿಯವರು ಕನಕ ಪೀಠ ಕಾಗಿನೆಲೆ
ಜಗದ್ಗುರು ಶ್ರೀ ಶಾಂತವೀರ ಮಹಾಸ್ವಾಮಿಗಳು ಶ್ರೀ ಜಗದ್ಗುರು ಕುಂಚಿಟಿಗ ಮಾಸಂಸ್ಥಾನ ಮಠ ಹೊಸದುರ್ಗ

ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮಿಗಳು ಭೋವಿ ಗುರುಪೀಠ ಚಿತ್ರದುರ್ಗ

ಜಗದ್ಗುರು ಶ್ರೀ ಬಸವಮೂರ್ತಿ ಮಾದರ ಚನ್ನಯ್ಯ ಮಹಾಸ್ವಾಮಿಗಳು ಮಾದರ ಚನ್ನಯ ಗುರುಪೀಠ ಚಿತ್ರದುರ್ಗ

ಜಗದ್ಗುರು ಶ್ರೀ ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳು ಭಗಿರಥ ಪೀಠ ಮಧುರೆ

ಪರಮಪೂಜ್ಯ ಶ್ರೀ ಈಶ್ವರಾನಂದಪುರಿ ಮಹಾಸ್ವಾಮಿಗಳು ಕನಕ ಗುರುಪೀಠ ಹೊಸದುರ್ಗ

ಶ್ರೀ ರೇಣುಕಾನಂದ ಸ್ವಾಮಿಗಳು ನಾರಾಯಣ ಗುರುಪೀಠ ಶಿವಮೊಗ್ಗ

ಶ್ರೀ ಬಸವ ಮಾಚಿದೇವ ಮಹಾಸ್ವಾಮಿಗಳು ಮಡಿವಾಳ ಗುರುಪೀಠ ಚಿತ್ರದುರ್ಗ

ಶ್ರೀ ಅನ್ನದಾನಿ ಭಾರತಿ ಅಪ್ಪಣ್ಣ ಸ್ವಾಮಿಗಳು ಹಡಪದ ಅಪ್ಪಣ್ಣ ಗುರುಪೀಠ ತಂಗಡಗಿ

ಶ್ರೀ ಶಾಂತಮ್ಮಯ್ಯ ಸ್ವಾಮೀಜಿಗಳು ಸರೂರು ವಿಜಯನಗರ

Tags: