ಮೈಸೂರು: ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳು ಸೇರಿದಂತೆ ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ, ಮಲೆನಾಡು ಹಾಗೂ ಕೊಡಗಿನಲ್ಲಿ ಇಂದು ಮತ್ತು ನಾಳೆ ಗುಡುಗು ಮಿಂಚು ಸಹಿತ ಜೋರಾದ ಗಾಳಿಯೊಂದಿಗೆ ವ್ಯಾಪಕವಾಗಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಹೀಗಾಗಿ, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿದ ದಿನಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.
ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿಯೂ ಸಹ ಇಂದು ಗುಡುಗು ಮಿಂಚು ಸಹಿತ ಜೋರಾದ ಗಾಳಿಯೊಂದಿಗೆ ಅಲ್ಲಲ್ಲಿ ಭಾರಿ ಮಳೆಯಾಗುತ್ತದೆ. ಇನ್ನುಳಿದ ದಿನಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಉತ್ತರ ಒಳನಾಡು ಜಿಲ್ಲೆಗಳಿಗೂ ಸಹ ಇಂದು ಮತ್ತು ನಾಳೆ ಗುಡುಗು ಮಿಂಚು ಸಹಿತ ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.