Mysore
30
overcast clouds

Social Media

ಶನಿವಾರ, 10 ಅಕ್ಟೋಬರ್ 2026
Light
Dark

ಸಕ್ಕರೆ ನಾಡು ಮಂಡ್ಯದಲ್ಲಿಂದು ಎಚ್.ಡಿ.ಕುಮಾರಸ್ವಾಮಿ ಮೊದಲ ದಿಶಾ ಸಭೆ

ಮಂಡ್ಯ: ಸಂಸದರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಂದು ಮಂಡ್ಯದಲ್ಲಿ ದಿಶಾ ಸಭೆ ನಡೆಸಲಿದ್ದಾರೆ.

ಮಂಡ್ಯಕ್ಕೆ ಭೇಟಿ ನೀಡಲಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ದಿಶಾ ಸಭೆ ನಡೆಸಲಿದ್ದು, ಕೇಂದ್ರದ ಎಲ್ಲಾ ಯೋಜನೆಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಲಿದ್ದಾರೆ.

ದಿಶಾ ಸಭೆಯ ಮೂಲಕ ಸಚಿವ ಚಲುವರಾಯಸ್ವಾಮಿಗೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ತಿರುಗೇಟು ನೀಡಲಿದ್ದಾರೆ ಎಂಬ ಮಾತುಗಳು ಸಹ ಕೇಳಿಬರುತ್ತಿವೆ.

ಇಂದಿನ ದಿಶಾ ಸಭೆಗೆ ಸಚಿವ ಚಲುವರಾಯಸ್ವಾಮಿ ಗೈರಾಗುವುದು ಖಚಿತವಾಗಿದ್ದು, ಜಿಲ್ಲೆಯ ಕಾಂಗ್ರೆಸ್‌ ಶಾಸಕರಾದರೂ ಭಾಗಿಯಾಗಲಿದ್ದಾರ ಎಂಬ ಪ್ರಶ್ನೆ ಮೂಡಿದೆ.

ಕಾಂಗ್ರೆಸ್‌ ನಾಯಕರು ರಾಜಕೀಯ ಮರೆತು ಅಭಿವೃದ್ಧಿ ವಿಚಾರದಲ್ಲಿ ಒಂದಾಗುತ್ತಾರೆ ಎಂದು ಹೇಳಲಾಗುತ್ತಿದ್ದು, ಇಂದಿನ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ್‌, ಎಸ್ಪಿ ಮಲ್ಲಿಕಾರ್ಜುನ ಬಾಲದಂಡೆ ಸೇರಿದಂತೆ ಎಲ್ಲಾ ಜಿಲ್ಲಾಮಟ್ಟದ ಅಧಿಕಾರಿಗಳು, ತಹಶೀಲ್ದಾರ್‌ಗಳು ಭಾಗಿಯಾಗಲಿದ್ದಾರೆ.

Tags:
error: Content is protected !!