Mysore
27
scattered clouds

Social Media

ಮಂಗಳವಾರ, 23 ಡಿಸೆಂಬರ್ 2025
Light
Dark

ಸಿದ್ದರಾಮಯ್ಯರನ್ನು ಕಂಡರೆ ಬಿಜೆಪಿಯವರಿಗೆ ಭಯ: ಶಾಸಕ ಪ್ರದೀಪ್‌ ಈಶ್ವರ್‌ ಕಿಡಿ

ಚಿಕ್ಕಬಳ್ಳಾಪುರ: ಮುಡಾ ಹಗರಣದಲ್ಲಿ ಸಿದ್ದರಾಮಯ್ಯರನ್ನು ಬಿಜೆಪಿಗರು ಏನೂ ಮಾಡಲು ಸಾಧ್ಯವಿಲ್ಲ ಎಂದು ಶಾಸಕ ಪ್ರದೀಪ್‌ ಈಶ್ವರ್‌ ಕಿಡಿಕಾರಿದ್ದಾರೆ.

ಈ ಬಗ್ಗೆ ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಕಾಂಗ್ರೆಸ್‌ ಶಾಸಕ ಪ್ರದೀಪ್‌ ಈಶ್ವರ್‌ ಅವರು, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯರನ್ನು ಕಂಡರೆ ಬಿಜೆಪಿಯವರಿಗೆ ಭಯ ಶುರುವಾಗಿದೆ. ಸಿಎಂ ಸಿದ್ದರಾಮಯ್ಯರನ್ನು ಏನೂ ಮಾಡಲು ಆಗಲ್ಲ. ಕುಮಾರಸ್ವಾಮಿ ಹಾಗೂ ವಿಜಯೇಂದ್ರಗೆ ಸಿದ್ದರಾಮಯ್ಯರನ್ನು ಸಹಿಸಿಕೊಳ್ಳುವ ಶಕ್ತಿ ಇಲ್ಲ ಎಂದು ಕಿಡಿಕಾರಿದರು.

ಇನ್ನು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯರನ್ನು ಏನೂ ಮಾಡಲು ಆಗಲ್ಲ. ಸಿದ್ದರಾಮಯ್ಯರನ್ನೇ ನಾವೆಲ್ಲಾ ಸಿಎಂ ಆಗಿ ಉಳಿಸಿಕೊಳ್ಳುತ್ತೇವೆ. ಸಿಎಂಗೆ ಬಿಜೆಪಿಯವರು ಏನೂ ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ.

ಇನ್ನು ಆಪರೇಷನ್‌ ಕಮಲದ ಬಗ್ಗೆ ಮಾತನಾಡಿದ ಅವರು, ಆಪರೇಷನ್‌ ಕಮಲ ಮಾಡಲು ನಮ್ಮ ಪಕ್ಷದಲ್ಲಿ ಕೆ.ಸುಧಾಕರ್‌ರಂತಹ ಎಂಎಲ್‌ಎ ಇಲ್ಲ. ಅದೇಗೆ ಆಪರೇಷನ್‌ ಮಾಡುತ್ತಾರೆ ಎಂದು ಪ್ರಶ್ನಿಸಿದರು. ಬಿಜೆಪಿಯವರಿಗೆ ನಮ್ಮನ್ನು ಖರೀದಿ ಮಾಡುವ ಶಕ್ತಿ ಇದೆಯಾ ಎಂದು ಕಿಡಿಕಾರಿದರು.

 

Tags:
error: Content is protected !!