Mysore
23
haze

Social Media

ಮಂಗಳವಾರ, 06 ಜನವರಿ 2026
Light
Dark

ಪ್ರತಿಯೊಬ್ಬರು ಒಮ್ಮೆಯಾದರೂ ಭಗವದ್ಗೀತೆ ಓದಿ: ಡಾ.ಕುಮಾರ ಸಲಹೆ

ಮಂಡ್ಯ: ಪ್ರತಿಯೊಬ್ಬರೂ ತಮ್ಮ ಬದುಕಿನ ಜೀವಿತಾವಧಿಯಲ್ಲಿ ಒಮ್ಮೆಯಾದರೂ ಭಗವದ್ಗೀತೆಯನ್ನು ಓದಿ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಸಲಹೆ ನೀಡಿದರು.

ಅವರು ಇಂದು(ಆ.26) ಮಂಡ್ಯ ವಿದ್ಯಾನಗರದ ವಿ.ವಿ ರಸ್ತೆಯ ಶ್ರೀ ಶಾರದ ಚಂದ್ರಮೌಳೇಶ್ವರ ಪ್ರಾರ್ಥನಾ ಮಂದಿರದಲ್ಲಿ ನಡೆದ ಶ್ರೀ ಕೃಷ್ಣ ಜನ್ಮಾಷ್ಟಮಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಮನುಷ್ಯ ತಿಳಿದುಕೊಳ್ಳುವುದು ಬಹಳಷ್ಟು ಇದೇ. ಆಗಾಗಿ, ಭಗವದ್ಗೀತೆಯನ್ನು ಸಹ ಓದಿ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕಾದದ್ದು ಸಾಕಷ್ಟು ಇದೇ. ಹೀಗಾಗಿ, ಪ್ರತಿನಿತ್ಯ ಒಂದು ಪುಟ ಭಗವದ್ಗೀತೆಯನ್ನು ಓದುವ ಅಭ್ಯಾಸ ಮಾಡಿಕೊಂಡರೆ ಮನಸ್ಸು ಕೂಡ ಹಗುರವಾಗುತ್ತದೆ ಎಂದು ಹೇಳಿದರು.

ಮಕ್ಕಳಿಗೆ ಭಗವದ್ಗೀತೆ ಓದುವ ಅಭ್ಯಾಸ ಮಾಡಿ, ಭಗವದ್ಗೀತೆಯಲ್ಲಿರುವ ಒಳಿತನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸೀಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರ ಬಿ.ವಿ ನಂದೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Tags:
error: Content is protected !!