Mysore
28
scattered clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ಸೆಪ್ಟೆಂಬರ್.‌15ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆ: ಸಚಿವ ಮಹದೇವಪ್ಪ ಮಾಹಿತಿ

ಬೆಂಗಳೂರು: ಸೆಪ್ಟೆಂಬರ್.‌15ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಿಸಲು ಸರ್ಕಾರ ನಿರ್ಧರಿಸಿದೆ ಎಂದು ಸಚಿವ ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸೆಪ್ಟೆಂಬರ್.‌15ನೇ ತಾರೀಖಿನಂದು ಜರುಗುತ್ತಿರುವ ಈ ಬೃಹತ್‌ ಕಾರ್ಯಕ್ರಮದಲ್ಲಿ ಬೀದರ್‌ನಿಂದ ಚಾಮರಾಜನಗರದವರೆಗೆ ಬೃಹತ್‌ ಮಾನವ ಸರಪಳಿಯನ್ನು ನಿರ್ಮಿಸಿ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ದಾರಿಯುದ್ದಕ್ಕೂ ಪಸರಿಸುವ ಕೆಲಸ ಮಾಡುತ್ತೇವೆ. ಆಯಾಯ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮಾನವ ಸರಪಳಿಯ ಜವಾಬ್ದಾರಿಯನ್ನು ವಹಿಸಲಿದ್ದಾರೆ ಎಂದರು.

ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತದ ಮುಂದಿನ ಪೀಳಿಗೆಯು ಪ್ರಜಾಪ್ರಭುತ್ವದ ಮೌಲ್ಯಾನುಸಾರ ಶಕ್ತವಾಗಬೇಕಾದರೆ ಪ್ರಜಾಪ್ರಭುತ್ವದ ಮೌಲ್ಯಗಳ ಕುರಿತ ಅರಿವಿನ ಜಾಗೃತಿ ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರವು ಬೃಹತ್‌ ಮಾನವ ಸರಪಳಿಯನ್ನು ರಚಿಸುವ ಮೂಲಕ ವಿಭಿನ್ನವಾಗಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಲಿದೆ.

ಸೆಪ್ಟೆಂಬರ್‌.15ರಂದು ಬೆಳಿಗ್ಗೆ 8.30ಕ್ಕೆ ಆರಂಭಗೊಳ್ಳುವ ಈ ಕಾರ್ಯಕ್ರಮದಲ್ಲಿ ಸುಮಾರು 40 ಲಕ್ಷ ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ಮಾಹಿತಿ ನೀಡಿದರು.

ಇನ್ನು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಇಂದು ಸಚಿವ ಎಚ್.ಸಿ.ಮಹದೇವಪ್ಪ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಕೊಠಡಿಯಲ್ಲಿ ಪೂರ್ವ ಸಿದ್ಧತಾ ಸಭೆ ನಡೆಸಿದರು.

 

Tags: