Mysore
21
overcast clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ರಾಜ್ಯಸಭೆಯಲ್ಲಿ12 ಸದಸ್ಯರು ಅವಿರೋಧ ಆಯ್ಕೆ: ಎನ್‌ಡಿಗೆ ಸ್ಪಷ್ಟ ಬಹುಮತ

ನವದೆಹಲಿ: 2014ರ ನಂತರ ಮೊದಲ ಬಾರಿಗೆ ರಾಜ್ಯಸಭೆಯಲ್ಲಿ ಎನ್‌ಡಿಎಗೆ ಸ್ಪಷ್ಟ ಬಹುಮತ ಸಿಕ್ಕಿದೆ.

ರಾಜ್ಯಸಭೆಗೆ 12 ಸದಸ್ಯರು ಅವಿರೋಧವಾಗಿ ಆಯ್ಕೆಯಾದ ಬೆನ್ನಲ್ಲೇ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಮೇಲ್ಮನೆಯಲ್ಲಿ 2014ರ ನಂತರ ಸ್ಪಷ್ಟ ಬಹುಮತವನ್ನು ಪಡೆದಿದೆ.

ಉಪಚುನಾವಣೆಯಲ್ಲಿ ಬಿಜೆಪಿ 9 ಸ್ಥಾನ ಗೆದ್ದರೆ ಮಿತ್ರ ಪಕ್ಷಗಳಾದ ಎನ್‌ಸಿಪಿ ಮತ್ತು ರಾಷ್ಟ್ರೀಯ ಲೋಕ ಮಂಚ್‌ನ ತಲಾ ಒಬ್ಬರು ಆಯ್ಕೆಯಾಗಿದ್ದಾರೆ. ಇನ್ನೊಂದು ಸ್ಥಾನವನ್ನು ಕಾಂಗ್ರೆಸ್‌ ಪಕ್ಷ ತೆಲಂಗಾಣದಿಂದ ಗೆದ್ದುಕೊಂಡಿದೆ.

ಹಿರಿಯ ವಕೀಲ ಅಭಿಷೇಕ್‌ ಸಿಂಘ್ವಿ ಅವರು ಕಾಂಗ್ರೆಸ್‌ನಿಂದ ಆಯ್ಕೆಯಾಗಿದ್ದಾರೆ. ರಾಜ್ಯಸಭೆಯ 10 ಸದಸ್ಯರು ಲೋಕಸಭೆಗೆ ಆಯ್ಕೆಯಾಗಿದ್ದರು. ಬಿಆರ್‌ಎಸ್‌ನ ಕೇಶವ ರಾವ್‌ ಹಾಗೂ ಬಿಜೆಡಿಯ ಮಮತಾ ಮೊಹಾಂತ ಅವರು ಕ್ರಮವಾಗಿ ಕಾಂಗ್ರೆಸ್‌ ಹಾಗೂ ಬಿಜೆಪಿ ಸೇರುವ ಮುನ್ನ ರಾಜೀನಾಮೆ ನೀಡಿದ್ದರಿಂದ 12 ಸ್ಥಾನಗಳಿಗೆ ಉಪಚುನಾವಣೆ ನಡೆದಿತ್ತು.

ಮೋದಿ ಸರ್ಕಾರ ಎರಡೂ ಅವಧಿಯಲ್ಲಿ ಎನ್‌ಡಿಎ ಮತ್ತು ಯುಪಿಎ ಹೊರತಾದ ಪಕ್ಷಗಳ ಸದಸ್ಯರ ಬಲದಿಂದ ರಾಜ್ಯಸಭೆಯಲ್ಲಿ ಮಸೂದೆಗಳನ್ನು ಪಾಸ್‌ ಮಾಡುತ್ತಿತ್ತು. ಈಗ ರಾಜ್ಯಸಭೆಯಲ್ಲಿ ಸ್ಪಷ್ಟ ಬಹುಮತ ಸಿಕ್ಕಿರುವ ಹಿನ್ನೆಲೆಯಲ್ಲಿ ಇನ್ನು ಹಲವು ಮಸೂದೆಗಳನು ಪಾಸ್‌ ಮಾಡಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.

 

 

Tags: