Mysore
21
overcast clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಓದುಗರ ಪತ್ರ: ನೀರಿನ ಟ್ಯಾಂಕ್‌ ಸುತ್ತ ಸ್ವಚ್ಛತೆ ಕಾಪಾಡಿ

ಚಾಮರಾಜನಗರ ತಾಲ್ಲೂಕಿನ ಬದನಗುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿರುವ ಮರಿಯಾಲದಹುಂಡಿ ಗ್ರಾಮದ ಡಾ.ಬಿ.ಆರ್. ಅಂಬೇಡ್ಕರ್ ಬಡಾವಣೆಯಲ್ಲಿನ ನೀರಿನ ಟ್ಯಾಂಕ್ ಸುತ್ತ ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗಿದೆ.
ಇಲ್ಲಿನ ನಿವಾಸಿಗಳಿಗೆ ಕುಡಿಯುವ ನೀರನ್ನು ಈ ನೀರಿನ ಟ್ಯಾಂಕ್ ಪೂರೈಸುವ ಸಲುವಾಗಿ (ತೊಂಬೆ) ನಿರ್ಮಿಸಿ, ಬದನಗುಪ್ಪೆ ಗ್ರಾಮ ಪಂಚಾಯಿತಿಯವರಿಗೆ ನಿರ್ವಹಣೆಯ ಜವಾಬ್ದಾರಿ ನೀಡಲಾಗಿತ್ತು. ಆದರೆ ಗ್ರಾಮ ಪಂಚಾಯಿತಿಯವರ ನಿರ್ಲಕ್ಷದಿಂದಾಗಿ ಈ ನೀರಿನ ಟ್ಯಾಂಕ್ ಸುತ್ತ ಗಿಡಗಂಟಿಗಳು ಬೆಳೆದುಕೊಂಡಿದ್ದು, ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗಿದೆ. ಈ ಬಡಾವಣೆಯ ಅನೇಕ ಕುಟುಂಬಗಳಿಗೆ ಈ ಟ್ಯಾಂಕ್ ನೀರಿನ ಮೂಲವಾಗಿದ್ದು, ಇಲ್ಲಿನ ಅನೈರ್ಮಲ್ಯದ ವಾತಾವರಣದಿಂದಾಗಿ ಸಾರ್ವಜನಿಕರು ಇದರ ನೀರನ್ನು ಬಳಸಲು ಹಿಂದೇಟು ಹಾಕುವಂತಾಗಿದೆ. ಅಲ್ಲದೆ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ ಟ್ಯಾಂಕ್ ಸುತ್ತ ಸ್ವಚ್ಛತೆ ಕಾಪಾಡುವ ಜತೆಗೆ ಬಡಾವಣೆಯ ಜನರಿಗೆ ಶುದ್ಧ ಕುಡಿಯುವ ನೀರನ್ನು ಪೂರೈಕೆ ಮಾಡಬೇಕಿದೆ.

-ನಾಗೇಶ್, ಮಾನಸಗಂಗೋತ್ರಿ, ಮೈಸೂರು,

Tags: