ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿದ ಆಸ್ತಿ ಪ್ರಕರಣದಲ್ಲಿ ಸಿಬಿಐ ತನಿಖೆಯ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಡಿಸಿಎಂ ಡಿಕೆ ಶಿವಕುಮಾರ್‌ಗೆ ಬಿಗ್ ರಿಲೀಫ್ ಸಿಕ್ಕಾಂತಾಗಿದೆ.
ಆದಾಯಕ್ಕೂ ಮೀರಿದ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದಿರವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಕುರಿತು ಹೈಕೋರ್ಟ್ ಇಂದು ವಿಚಾರಣೆ ನಡೆಸಿತು.
ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದಿರುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಸಿಬಿಐ ಹಾಗೂ ಬಿಜೆಪಿ ಶಾಸಕ ಯತ್ನಾಳ್ ಸಲ್ಲಿಸಿರುವ ಮೇಲ್ಮನವಿ ಕುರಿತು ನ್ಯಾಯಪೀಠ ವಿಚಾರಣೆ ಪೂರ್ಣಗೊಳಿಸಿ ಅರ್ಜಿಯನ್ನು ವಜಾಗೊಳಿಸಿತು.
ಸಿಬಿಐ ಹಾಗೂ ರಾಜ್ಯದ ನಡುವಿನ ವಿವಾದವನ್ನು ಸುಪ್ರೀಂಕೋರ್ಟ್‌ನಲ್ಲಿಯೇ ಬಗೆಹರಿಸಿಕೊಳ್ಳುವುದು ಸೂಕ್ತ. ಸಿಬಿಐ ಬದಲಾಗಿ ಲೋಕಾಯುಕ್ತದಲ್ಲಿ ತನಿಖೆ ಮುಂದುವರೆಸಬಹುದು ಎಂದು ವಿಭಾಗೀಯ ಪೀಠ ಹೇಳಿದೆ. ಈ ಮೂಲಕ ಕೇಸ್ ಅರ್ಜಿಯನ್ನು ವಜಾಗೊಳಿಸಿದೆ.