ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ನಟ ದರ್ಶನ್ ಅವರಿಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗುತ್ತಿದೆ ಎಂದು ಆರೋಪಿಸಿ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿದೆ.
ಇಂದಿಗೆ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿ ಮೂರು ದಿನಗಳಾಗಿವೆ. ಇನ್ನು ಜಮೀರ್ ಅಹ್ಮದ್ ಖಾನ್ ಅವರು ಜಿಲ್ಲಾ ಉಸ್ತುವಾರಿಯಾಗಿರುವ ಕಾರಣ ದರ್ಶನ್ ಅವರನ್ನು ಬಳ್ಳಾರಿಗೆ ಶಿಫ್ಟ್ ಮಾಡಲಾಗಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಜಮೀರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ನಾನು ಹಾಗೂ ದರ್ಶನ್ ಅವರ ನಡುವೆ ಉತ್ತಮ ಒಡನಾಟವಿದೆ. ಇದು ಎಲ್ಲರಿಗೂ ಗೊತ್ತಿರುವ ವಿಚಾರವಾಗಿದೆ. ಹಾಗೆಂದ ಮಾತ್ರಕ್ಕೆ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿಲ್ಲ. ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ನನಗೆ ಯಾವುದೇ ಸಂಬಂಧವಿಲ್ಲ. ನಾನು ಉಸ್ತುವಾರಿ ಸಚಿವ ಅಷ್ಟೆ, ಡಿಜಿ ಅಲ್ಲ. ಪೊಲೀಸ್ ಇಲಾಖೆ ತೀರ್ಮಾನದ ಮೇರೆಗೆ ಇಲ್ಲಿಗೆ ಶಿಫ್ಟ್ ಮಾಡಲಾಗಿದೆ ಎಂದು ಜಮೀರ್ ಸ್ಪಷ್ಟನೆ ನೀಡಿದರು.