Mysore
27
scattered clouds

Social Media

ಬುಧವಾರ, 15 ಜನವರಿ 2025
Light
Dark

ಬಿಆರ್‌ಟಿ ವಲಯದಲ್ಲಿ ಪತ್ತೆಯಾದ ಹೆಣ್ಣಾನೆ ಕಳೇಬರ

ಹನೂರು: ತಾಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ನಾಲ್ಕು ದಿನಗಳ ಅಂತರದಲ್ಲಿ ಮೂರು ಆನೆಗಳ ಅಸ್ತಿಪಂಜರಗಳು ತಡವಾಗಿ ಕಾಣಿಸಿಕೊಂಡಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಇಂದು ಮೂರನೇ ಆನೆ ಕಳೇಬರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ. ಬೈಲೂರು ವನ್ಯ ಜೀವಿ ವಲಯ ಪಿಜಿ ಪಾಳ್ಯ ಮಾವತ್ತೂರು ಬಿ ಗಸ್ತಿನಲ್ಲಿ ಸಿಬ್ಬಂದಿಗಳು ಗಸ್ತು ಮಾಡುವಾಗ ದೂಪದ ಮರದ ಹೊಡ್ಡು ಅರಣ್ಯ ಪ್ರದೇಶದಲ್ಲಿ ಮೃತ ಆನೆ ಪತ್ತೆಯಾಗಿದೆ. ಸುಮಾರು 60 ರಿಂದ 65 ವಯಸ್ಸಿನ ಹೆಣ್ಣಾನೆಯಾಗಿದ್ದು, 8 ದಿನಗಳ ಹಿಂದೆ ಸ್ವಾಭಾವಿಕವಾಗಿ ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ.

ಕಳೆದ ಮೂರು ದಿನಗಳ ಹಿಂದೆ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ಆಳದ ಕೆರೆ ಅರಣ್ಯ ಪ್ರದೇಶದಲ್ಲಿ ಎಂಟು ತಿಂಗಳ ಹಿಂದೆ ಸ್ವಾಭಾವಿಕವಾಗಿ ಗಂಡಾನೆ ಮೃತಪಟ್ಟಿರುವುದು ತಡವಾಗಿ ಬೆಳಕಿಗೆ ಬಂದಿದೆ.

ಬಳಿಕ ಆಗಸ್ಟ್ 27ರಂದೇ ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ಯಳಂದೂರು ವನ್ಯಜೀವಿ ವಲಯ ಪುರಾಣಿ ಶಾಖೆ ಬೇತಾಳ ಕಟ್ಟೆ ಗಸ್ತಿನಲ್ಲಿ ಸಿಬ್ಬಂದಿಗಳು ಗಸ್ತಿನಲ್ಲಿದ್ದಾಗ ಆಳಶೆಟ್ಟಿಕಟ್ಟೆ ಮೂಲೆ ಎಂಬ ಅರಣ್ಯ ಪ್ರದೇಶದಲ್ಲಿ ಗಂಡಾನೆಯು ಮೃತಪಟ್ಟಿತ್ತು. ಇದೇ ರೀತಿ ಆಗಸ್ಟ್ 30 ರಂದು ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯ ಬೈಲೂರು ವ್ಯಾಪ್ತಿಯಲ್ಲಿ ಮತ್ತೊಂದು ಆನೆ ಶವ ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.

ಈ ಬಗ್ಗೆ ಮಾತನಾಡಿರುವ ಬೈಲೂರು ವನ್ಯ ಜೀವಿ ವಲಯ ಅರಣ್ಯ ಪ್ರದೇಶದ ಆರ್‌ಎಫ್‌ಒ ಪ್ರಮೋದ್‌ ರಸ್ತೆಯಿಂದ ಎರಡು ಕಿಲೋ ಮೀಟರ್ ದೂರದಲ್ಲಿರುವ ಬಿದಿರಿನ ಪೊದೆಯಲ್ಲಿ ಆನೆ ಮೃತಪಟ್ಟಿರುವುದರಿಂದ ತಡವಾಗಿ ಗೊತ್ತಾಗಿದೆ. ನಮ್ಮ ಸಿಬ್ಬಂದಿಗಳು ಪ್ರತಿದಿನ ಗಸ್ತು ಮಾಡುತ್ತಾರೆ. ಈ ಎಲ್ಲಾ ಆನೆಗಳು ಸ್ವಾಭಾವಿಕವಾಗಿ ಮೃತಪಟ್ಟಿದೆ ಎಂದು ಅವರು ತಿಳಿಸಿದ್ದಾರೆ.

Tags: