Mysore
27
broken clouds

Social Media

ಬುಧವಾರ, 24 ಡಿಸೆಂಬರ್ 2025
Light
Dark

ತೆಲಂಗಾಣದಲ್ಲಿ ವರುಣನ ಅಬ್ಬರ: ಜನಜೀವನ ಸಂಪೂರ್ಣ ಅಸ್ತವ್ಯಸ್ತ

ಹೈದರಾಬಾದ್:‌ ತೆಲಂಗಾಣ ಮತ್ತು ನೆರೆಯ ಆಂಧ್ರಪ್ರದೇಶದ ಹಲವಾರು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ಮುಂದಿನ ಮೂರು ದಿನಗಳಲ್ಲಿ ಈ ಭಾಗದಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಧಾರಾಕಾರ ಮಳೆಯಿಂದಾಗಿ ಆಂಧ್ರಪ್ರದೇಶದ ಪ್ರಮುಖ ನಗರ ವಿಜಯವಾಡ ಸಂಪೂರ್ಣ ಜಲಾವೃತಗೊಂಡಿದ್ದು, ರಸ್ತೆಗಳಲ್ಲಿ ಮಳೆಯ ನೀರು ನದಿಯಂತೆ ಹರಿಯುತ್ತಿದೆ. ಇದುವರೆಗೂ ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯದಲ್ಲಿ ಮಳೆಗೆ 8 ಮಂದಿ ಬಲಿಯಾಗಿದ್ದಾರೆ.

ತೆಲಂಗಾಣದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳು ಎಲ್ಲಾ ಕ್ರಮಗಳನ್ನು ಕೈಗೊಂಡಿದ್ದಾರೆ. ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರನ್ನು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚನೆ ನೀಡಲಾಗಿದೆ.

ಭಾರೀ ಮಳೆಯಿಂದ ಜಲಾಶಯಗಳು ಕೂಡ ಸಂಪೂರ್ಣ ಭರ್ತಿಯಾಗಿದ್ದು, ಜಲಾಶಯದ ಗೇಟ್‌ ತೆರೆಯುವ ಹಿನ್ನೆಲೆಯಲ್ಲಿ ತಗ್ಗು ಪ್ರದೇಶದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ತೆಲಂಗಾಣ ಸರ್ಕಾರವು ಈ ಎಲ್ಲಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ನಾಳೆ ರಾಜ್ಯದಾದ್ಯಂತ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ನೀಡಿ ಆದೇಶ ಹೊರಡಿಸಿದೆ.

 

Tags:
error: Content is protected !!