Mysore
29
overcast clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಕಾಂಗ್ರೆಸ್‌ನಲ್ಲಿ ಹೊಸ ಸಿಎಂ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಿದೆ: ಶಾಸಕ ಯತ್ನಾಳ್‌ ವ್ಯಂಗ್ಯ

ಬೆಂಗಳೂರು: ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನು ಬದಲಿಸಿ ಹೊಸ ಸಿಎಂ ಆಗುವ ಆಕಾಂಕ್ಷಿಗಳ ಪಟ್ಟಿ ದಿನದಿಂದ ದಿನಕ್ಕೆ ಬೆಳೆಯುತ್ತಲೇ ಇದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವ್ಯಂಗ್ಯವಾಡಿದ್ದಾರೆ.

ಮುಡಾ ಹಗರಣದಿಂದ ಸಿಎಂ ಸಿದ್ದರಾಮಯ್ಯ ಭಾರೀ ಮುಜುಗರಕ್ಕೆ ಒಳಗಾಗಿದ್ದಾರೆ ಎನ್ನುತ್ತಿರುವ ಬೆನ್ನಲ್ಲೇ ಈಗ ಕಾಂಗ್ರೆಸ್‌ನಲ್ಲಿ ಸಿಎಂ ಆಕಾಂಕ್ಷಿಗಳ ಪಟ್ಟಿ ಹೆಚ್ಚಾಗುತ್ತಲೇ ಹೋಗುತ್ತಿದೆ.

ಈ ಬೆಳವಣಿಗೆಗಳ ನಡುವೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಟ್ವೀಟ್‌ ಮಾಡಿದ್ದು, ಕಾಂಗ್ರೆಸ್‌ನಲ್ಲಿ ಸತೀಶ್‌ ಜಾರಕಿಹೊಳಿ, ಡಿಕೆಶಿ, ಪರಮೇಶ್ವರ್‌, ಮಲ್ಲಿಕಾರ್ಜುನ ಖರ್ಗೆ ಆಯ್ತು ಈಗ ಆರ್.ವಿ.ದೇಶಪಾಂಡೆ ಅವರು ಸಿಎಂ ಆಗುವ ಆಕಾಂಕ್ಷಿಗಳ ಪಟ್ಟಿ ಸೇರ್ಪಡೆಯಾಗಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.

ರಾಜ್ಯದ ಅಭಿವೃದ್ಧಿಗೆ ದುಡಿಯುವುದಕ್ಕಿಂತ ವೈಯಕ್ತಿಕ ವರ್ಚಸ್ಸನ್ನು ಹೆಚ್ಚಿಸಿಕೊಳ್ಳುವವರೇ ಹೆಚ್ಚಾಗಿದ್ದಾರೆ. ಆಡಳಿತ, ಕಾನೂನು ಸುವ್ಯವಸ್ಥೆ ನಿಷ್ಕ್ರಿಯವಾಗಿದೆ. ಇದು ಈ ಸರ್ಕಾರ ಕಥೆ, ವ್ಯಥೆ ಎಂದು ಲೇವಡಿ ಮಾಡಿದ್ದಾರೆ.

Tags: