ಮೈಸೂರು: ಅಂಗನವಾಡಿ ಕಾರ್ಯಕರ್ತೆಯರ ವೇತನವನ್ನು ಬಾಕಿ ಉಳಿಸಿಕೊಂಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಅಂಗನವಾಡಿ ಕಾರ್ಯಕರ್ತೆಯರ ವೇತನ ಆಗದ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಂ ಸಿದ್ದರಾಮಯ್ಯ ಅವರು, ಈ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ಆದರೆ ನಾವು ಯಾವುದೇ ವೇತನ ಬಾಕಿ ಉಳಿಸಿಕೊಂಡಿಲ್ಲ. ಒಂದು ವೇಳೆ ವೇತನ ಉಳಿಸಿಕೊಂಡಿದ್ದರೆ ಆ ಬಗ್ಗೆ ಮಾಹಿತಿ ಪಡೆದು ಎಲ್ಲವನ್ನೂ ಸರಿಪಡಿಸುತ್ತೇವೆ. ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುವ ಅವಶ್ಯಕತೆಯಿಲ್ಲ. ರಾಜ್ಯ ಸರ್ಕಾರ ಎಲ್ಲರ ಸಮಸ್ಯೆಗೆ ಸ್ಪಂದಿಸಲಿದೆ ಎಂದರು.
ಇನ್ನು ಸಿದ್ದರಾಮಯ್ಯ ಅವರು ಒಪ್ಪಿಗೆ ಕೊಟ್ಟರೆ ಸಿಎಂ ಆಗುತ್ತೇನೆ ಎಂಬ ಹಿರಿಯ ನಾಯಕ ಆರ್.ವಿ.ದೇಶಪಾಂಡೆ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಆಗಲು ಪರ್ಮಿಷನ್ ಕೊಡೋಕೆ ನಾನ್ಯಾರು. ಅದು ಪಕ್ಷದ ಶಾಸಕರು ಹಾಗೂ ಹೈಕಮಾಂಡ್‌ಗೆ ಬಿಟ್ಟ ತೀರ್ಮಾನ ಎಂದು ನಗುತ್ತಾ ಹೇಳಿದರು.