Mysore
25
broken clouds

Social Media

ಭಾನುವಾರ, 10 ನವೆಂಬರ್ 2024
Light
Dark

ಕರ್ಕಶ ಶಬ್ಧ ಮಾಡುತ್ತಿದ್ದ ಸೌಂಡ್‌ ಸೈಲೆನ್ಸರ್‌ಗಳ ಮೇಲೆ ರೋಡ್‌ ರೋಲರ್‌ ಹತ್ತಿಸಿದ ಪೊಲೀಸರು

ಮೈಸೂರು: ಮೈಸೂರಿನ ಸಿದ್ಧಾರ್ಥನಗರ ಸಂಚಾರಿ ಠಾಣೆ ಪೊಲೀಸರು ಇಂದು ಬೆಳ್ಳಂ ಬೆಳಿಗ್ಗೆ ಕಾರ್ಯಾಚರಣೆ ನಡೆಸಿ ಕರ್ಕಶ ಶಬ್ಧ ಮಾಡುತ್ತಿದ್ದ ಸೌಂಡ್‌ ಸೈಲೆನ್ಸರ್‌ಗಳ ಮೇಲೆ ರೋಡ್‌ ರೋಲರ್‌ ಹತ್ತಿಸಿ ಪುಡಿ ಪುಡಿ ಮಾಡಿದ್ದಾರೆ.

ಕಳೆದ ಕೆಲ ದಿನಗಳಿಂದ ಮೈಸೂರು ಪೊಲೀಸ್‌ ಕಮಿಷನರ್‌ ಸೀಮಾ ಲಾಟ್ಕರ್‌ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದ ಪೊಲೀಸರು, ಕರ್ಕಶ ಶಬ್ಧ ಮಾಡುತ್ತಿದ್ದ 90 ಕ್ಕೂ ಹೆಚ್ಚು ಬೈಕ್‌ಗಳನ್ನು ಸೀಜ್‌ ಮಾಡಿದ್ದರು.

ಇದೀಗ ಇಂದು ಬೆಳಿಗ್ಗೆ ಬೈಕ್‌ಗಳ 217 ಸೈಲೆನ್ಸರ್‌ಗಳ ಮೇಲೆ ರೋಡ್‌ ರೋಲರ್‌ ಹತ್ತಿಸಿ ಪುಡಿ ಪುಡಿ ಮಾಡಿದ್ದಾರೆ.

ಇದೆಲ್ಲಾ ಬೆಳವಣಿಗೆಗಳ ನಡುವೆ ಕಾನೂನು ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸರು ಮುಂದಾಗಿದ್ದು, ಸೀಜ್‌ ಮಾಡಿದ ವಾಹನಗಳಿಗೆ ಫೈನ್‌ ಹಾಕಿದ್ದಲ್ಲದೇ ವಾರ್ನಿಂಗ್‌ ಕೊಟ್ಟು ರಿಲೀಸ್‌ ಮಾಡಿದ್ದಾರೆ.

ಈ ಮೂಲಕ ಮೈಸೂರು ನಗರದಾದ್ಯಂತ ಕಾನೂನು ನಿಯಮ ಉಲ್ಲಂಘನೆ ಮಾಡುವವರಿಗೆ ಎಚ್ಚರಿಕೆ ನೀಡಿದ್ದು, ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆ ಆಗದಂತೆ ಸೂಚನೆ ನೀಡಲಾಗಿದೆ.

ಒಂದು ವೇಳೆ ರಸ್ತೆಗಳಲ್ಲಿ ಸಂಚಾರ ನಿಯಮ ಉಲ್ಲಂಘಿಸಿದರೆ ಬೈಕ್‌ ಸೀಜ್‌ ಮಾಡುವುದರ ಜೊತೆಗೆ ಇನ್ನು ಹೆಚ್ಚಿನ ದಂಡ ವಿಧಿಸಲು ಪೊಲೀಸರು ಪ್ಲಾನ್‌ ಮಾಡಿದ್ದಾರೆ.

Tags: