Mysore
22
scattered clouds

Social Media

ಬುಧವಾರ, 15 ಜನವರಿ 2025
Light
Dark

ವಾಮಮಾರ್ಗದಿಂದ ಅಧಿಕಾರ: ಮಾಜಿ ಶಾಸಕ ಬಿ.ಹರ್ಷವರ್ಧನ್ ಕಿಡಿ

ಮೈಸೂರು: ಕಾಂಗ್ರೆಸ್ ಪಕ್ಷ ವಾಮಮಾರ್ಗದ ಮೂಲಕ ನಂಜನಗೂಡು ನಗರ ಸಭೆಯ ಅಧಿಕಾರ ಹಿಡಿದಿದೆ ಎಂದು ಮಾಜಿ ಶಾಸಕ ಬಿ. ಹರ್ಷವರ್ಧನ್ ಕಿಡಿ ಕಾರಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾ.ದಳ ಸದಸ್ಯರ ನಿಲುವು ಆಘಾತ ಉಂಟು ಮಾಡಿದೆ ಅಧಿಕಾರ ಬೇಕೆಂಬ ಹಠದಲ್ಲಿ ಹಿಡಿಯ ಕಾಂಗ್ರೆಸ್ ಪಕ್ಷ ವಾಮ ಮಾರ್ಗ ಅನುಸರಿಸಿರು ವುದು ಖಂಡನೀಯ ಎಂದರು.

ಕಾಂಗ್ರೆಸ್ ಪಕ್ಷ ಅಕ್ರಮವಾಗಿ ಸಂಗ್ರಹಿಸಿರುವ ಹಣದ ಬಳಕೆ ಮಾಡಿ ಅಧಿಕಾರ ಹಿಡಿದಿದೆ. ಇದರಲ್ಲಿ ಕೆಪಿಸಿಸಿ ಅಧ್ಯಕ್ಷರು, ಸ್ಥಳೀಯ ಸಂಸದರು, ಶಾಸಕರ ಕೈವಾಡವಿದೆ. ಅಲ್ಲದೆ ನಮ್ಮ ಪಕ್ಷದಲ್ಲೇ ನಮ್ಮನ್ನು ತುಳಿ ಯುವ ಕೆಲಸ ನಡೆಯುತ್ತಿದೆ ಎಂದು ಬೇಸರಿಸಿದರು. ಮತ ದಾನಕ್ಕೆ ಗೈರು ಹಾಜರಾದ ನಾಲ್ವರು ಬಿಜೆಪಿ ಸದಸ್ಯರು ಕನಕಪುರದ ಬಳಿ ರೆಸಾರ್ಟ್ ನಲ್ಲಿ ಇದ್ದರೆಂದು ತಿಳಿದು ಬಂದಿತ್ತು.

ಈ ಬಗ್ಗೆ ಕಾಂಗ್ರೆಸ್ ಪಕ್ಷದ ಮುಖಂಡರೊಬ್ಬರು ಮಾಹಿತಿ ನೀಡಿದ್ದರು. ಆ ನಾಲ್ವರು ಸದಸ್ಯರು ಯಾವುದೇ ರೀತಿಯ ಸಂಪರ್ಕಕ್ಕೆ ಸಿಗಲಿಲ್ಲ. ಜಾ.ದಳದ ರೆಹಾನಬಾನು ಅವರಿಗೆ ಉಪಾಧ್ಯಕ್ಷ ಸ್ಥಾನ ನೀಡುವುದಾಗಿ ಒಪ್ಪಿದ್ದೆವು. ಆದರೂ ಜಾ.ದಳದ ಮೂವರು ಸದಸ್ಯರು ಕಡೇ ಕ್ಷಣದಲ್ಲಿ ಕಾಂಗ್ರೆಸ್ ಜತೆಗೆ ಕೈ ಜೋಡಿಸಿದರು. ಇವರೆಲ್ಲರೂ ಯಾವ ಆಮಿಷಕ್ಕೆ ಬಲಿಯಾಗಿದ್ದಾರೋ ಗೊತ್ತಿಲ್ಲ. ಬಹುಶಃ ಹಣದ ಆಮಿಷಕ್ಕೆ ಬಲಿಯಾಗಿರಬಹುದು ಎಂದರು.

ಪಕ್ಷದಿಂದ ಉಚ್ಚಾಟನೆ: ಗ್ರಾಮಾಂತರ ಬಿಜೆಪಿ ಅಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ ಮಾತನಾಡಿ, ನಗರಸಭೆ ಚುನಾವಣೆ ಸಂಬಂಧ ಬಿಜೆಪಿಯ ಎಲ್ಲಾ ಸದಸ್ಯರಿಗೂ ವಿಪ್ ಜಾರಿ ಮಾಡಲಾಗಿತ್ತು. ಆದರೂ ಪಕ್ಷದ ವಿಪ್ ಉಲ್ಲಂಘಿಸಿ ನಾಲ್ವರು ಬಿಜೆಪಿ ಸದಸ್ಯರು ಮತದಾನಕ್ಕೆ ಗೈರು ಹಾಜರಾಗಿದ್ದಾರೆ. ಹಾಗಾಗಿ ವಿಪ್ ಉಲ್ಲಂಘಿಸಿರುವ ಬಿಜೆಪಿ ನಗರಸಭೆ ಸದಸ್ಯರಾದ ಗಿರೀಶ್ ಕುಮಾರ್, ಗಾಯತ್ರಿ, ವಿಜಯಲಕ್ಷ್ಮಿ, ಮೀನಾಕ್ಷಿ ಅವರನ್ನು 6 ವರ್ಷಗಳ ಕಾಲ ಉಚ್ಚಾಟಿಸಿದ್ದು, ನಾಲ್ವರ ವಿರುದ್ಧವೂ ಕಾನೂನು ಹೋರಾಟ ನಡೆಸಲಾಗುತ್ತದೆ ಎಂದು ತಿಳಿಸಿದರು.

ಮುಖಂಡರಾದ ಚಿಕ್ಕರಂಗನಾಯಕ, ಎಸ್‌.ಮಹದೇವಯ್ಯ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

Tags: