ಹಾಸನ: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಮೊದಲನೇ ಹಂತಕ್ಕೆ ಸಕಲೇಶಪುರ ತಾಲ್ಲೂಕಿನ ಬೈಕೆರೆ ದೊಡ್ಡನಗರದ ಪಂಪ್ ಹೌಸ್ ನಲ್ಲಿ ಚಾಲನೆ ನೀಡಿದರು.
ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ 29 ತಾಲ್ಲೂಕುಗಳ ಬದುಕನ್ನೇ ಬದಲಾಯಿಸುವ ಈ ಮಹತ್ವಾಕಾಂಕ್ಷೆ ಯೋಜನೆ ಶಂಕುಸ್ಥಾಪನೆಗೊಂಡ ದಶಕಗಳ ಬಳಿಕ ಉದ್ಘಾಟನೆ ಭಾಗ್ಯ ಕಂಡಿದೆ.
ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಸಚಿವರಾದ ರಾಜಣ್ಣ, ಎಂ.ಬಿ.ಪಾಟೀಲ್, ಜಿ.ಪರಮೇಶ್ವರ್, ಕೆ.ಜೆ.ಜಾರ್ಜ್ ಸೇರಿ ಐದು ತಾಲ್ಲೂಕುಗಳ ಶಾಸಕರು, ಚುನಾಯಿತ ಪ್ರತಿನಿಧಿಗಳು ಇಲಾಖೆಯ ಹಿರಿಯ ಅಧಿಕಾರಿಗಳು ಈ ಸಂಭ್ರಮದ ಕ್ಷಣಕ್ಕೆ ಸಾಕ್ಷಿಯಾದರು.