Mysore
21
overcast clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ತಮಿಳಿಗ ವೆಟ್ರಿ ಕಳಗಂ ಪಕ್ಷವನ್ನ ಅಧಿಕೃತಗೊಳಿಸಿದ ಚುನಾವಣಾ ಆಯೋಗ

ತಮಿಳುನಾಡು: ತಮಿಳು ಚಿತ್ರರಂಗದ ಸ್ಟಾರ್‌ ನಟ ವಿಜಯ್‌ ದಳಪತಿ ಆರಂಭಿಸಿದ ತಮಿಳಿಗ ವೆಟ್ರಿ ಕಳಗಂ ಪಕ್ಷವನ್ನು ಚುನಾವಣಾ ಆಯೋಗವು ಅಧಿಕೃತವಾಗಿ ನೋಂದಣಿ ಮಾಡಿಕೊಂಡಿದೆ.

ಈ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿರುವ ನಟ ದಳಪತಿ ವಿಜಯ್‌ ಅವರು, ನಾವು ಫೆಬ್ರವರಿ.2ರಂದು ಚುನಾವಣಾ ಆಯೋಗಕ್ಕೆ ನಮ್ಮ ಪಕ್ಷದ ಮಾನ್ಯತೆಗಾಗಿ ಅರ್ಜಿ ಸಲ್ಲಿಸಿದ್ದೆವು. ನಮ್ಮ ಅರ್ಜಿಯನ್ನು ಕಾನೂನುಬದ್ಧವಾಗಿ ನೋಂದಾಯಿಸಿದೆ. ಚುನಾವಣಾ ರಾಜಕೀಯದಲ್ಲಿ ಭಾಗವಹಿಸಲು ನಮ್ಮ ಪಕ್ಷವನ್ನು ಅನುಮೋದಿಸಿದೆ ಎಂದು ತಿಳಿಸಿದ್ದಾರೆ.

ಇನ್ನು ಅಪಾರ ಅಭಿಮಾನಿಗಳನ್ನು ಹೊಂದಿರುವ ನಟ ವಿಜಯ್‌ ಅವರು, ತಮಿಳುನಾಡು ವಿಧಾನಸಭಾ ಚುನಾವಣೆಗೆ ಎಲ್ಲಾ ರೀತಿಯಲ್ಲೂ ಸಜ್ಜಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಕೂಡ ಪಕ್ಷವನ್ನು ಅಧಿಕೃತಗೊಳಿಸಿದ್ದು, ಮುಂದಿನ ದಿನಗಳಲ್ಲಿ ಪಕ್ಷದಲ್ಲಿ ಯಾರೆಲ್ಲಾ ಸ್ಪರ್ಧೆಗೆ ಇಳಿಯುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.

 

 

 

Tags: