Mysore
31
few clouds

Social Media

ಸೋಮವಾರ, 02 ಮಾರ್ಚ್ 2026
Light
Dark

ವಿಶೇಷ ಆಹ್ವಾನದ ಮೇರೆಗೆ ಅಮೆರಿಕಾಕ್ಕೆ ಹೊರಟ ಡಿಸಿಎಂ ಡಿಕೆ ಶಿವಕುಮಾರ್…‌

ಬೆಂಗಳೂರು: ಉಪ ಮುಖ್ಯಂತ್ರಿ ಡಿಕೆ ಶಿವಕುಮಾರ್‌ ವಿಶೇಷ ಆಹ್ವಾನದ ಮೇರೆಗೆ ಅಮೆರಿಕಾಗೆ ಇಂದು ರಾತ್ರಿಯೇ ಹೊರಡಲಿದ್ದಾರೆ. ಇಂದಿನಿಂದ ಏಳು ದಿನಗಳ ಕಾಲ ಪ್ರವಾಸ ಕೈಗೊಂಡಿರುವ ಅವರು ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿ ತಮ್ಮ ವಿದೇಶ ಪ್ರವಾಸದ ಬಗ್ಗೆ ಮಾಹಿತಿ ನೀಡಿದ್ದಾರೆ.

ಅಮೆರಿಕಾದ ಅಧ್ಯಕ್ಷೀಯ ಚುನಾವಣಾ ರಂಗೇರಿದೆ. ಅಧ್ಯಕ್ಷೀಯ ಸ್ಥಾನಕ್ಕೆ ಸ್ಪರ್ಧಿಸಿರುವ ಕಮಲ ಹ್ಯಾರಿಸ್‌ ಅವರ ಆಹ್ವಾನದ ಮೇರೆಗೆ ಡಿ.ಕೆ ಶಿವಕುಮಾರ್‌ ಖಾಸಗಿ ಹಾಗೂ ರಾಜತಾಂತ್ರಿಕ ಸಮಾವೇಶದಲ್ಲಿ ಭಾಗವಹಿಸಲು ಅಮೆರಿಕಕ್ಕೆ ತೆರಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಮಲಾ ಹ್ಯಾರಿಸ್‌ ಅವರು ಪ್ರಜಾಪ್ರಭುತ್ವ ಮತ್ತು ಚುನಾವಣೆ ಕುರಿತ ಸಂವಾದವನ್ನು ಆಯೋಜಿಸಿದ್ದಾರೆ. ಅದರಲ್ಲಿ ಭಾಗವಹಿಸಲು ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್‌ ಒಬಾಮ ಸೇರಿದಂತೆ ಹಲವರನ್ನು ಆಹ್ವಾನಿಸಿದ್ದು, ಅದರಲ್ಲಿ ಡಿಸಿಎಂ ಡಿಕೆ ಶಿವಕುಮಾರ್‌ ಅವರೂ ಕೂಡ ಆಹ್ವಾನಿತರಾಗಿದ್ದಾರೆ.

ಇನ್ನು ಈ ಬಗ್ಗೆ ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿಕೆಶಿ, ನಾನು ಒಂದು ವಾರ ಇರಲ್ಲ. ಅಮೆರಿಕಾ ಪ್ರವಾಸ ಕೈಗೊಂಡಿದ್ದೇನೆ. ಅಮೆರಿಕಾದಲ್ಲಿ ಖಾಸಗಿ ಕಾರ್ಯಕ್ರಮವಿದೆ, ಯಾರನ್ನೂ ಭೇಟಿ ಆಗಲ್ಲ. ವಿಶೇಷ ಫ್ಯಾಮಿಲಿ ಟ್ರಿಪ್‌ ಇದು, ಕುಟುಂಬ ಸಮೇತ ಹೋಗುತ್ತಿದ್ದೇವೆ ಎಂದು ಹೇಳಿದರು.

Tags:
error: Content is protected !!