Mysore
29
overcast clouds

Social Media

ಬುಧವಾರ, 17 ಜೂನ್ 2026
Light
Dark

ಬೆಲ್‌ಗೆ ನಟ ದರ್ಶನ್‌ ಸೋಮವಾರ ಅರ್ಜಿ ಸಲ್ಲಿಕೆ ಸಾಧ್ಯತೆ

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಕಳೆದ ಮೂರು ತಿಂಗಳಿಂದ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ದರ್ಶನ್‌ ನಾಳೆ(ಸೆ.9)ಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಕೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಹಾಗೂ ಸಹೋದರ ದಿನಾಕರ್‌ ತೂಗುದೀಪ ಅವರು ಬಳ್ಳಾರಿ ಜೈಲಿನಲ್ಲಿರುವ ಆರೋಪಿ ದರ್ಶನ್‌ನನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಜೊತೆಗೆ ಬೆಲ್‌ ಅರ್ಜಿ ಸಲ್ಲಿಸುವುದಕ್ಕೆ ಎಲ್ಲಾ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

ದರ್ಶನ್‌ ಪರ ವಕೀಲರು ಎಸಿಎಂಎಂ ಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಸುವ ಸಾಧ್ಯತೆ ಇದ್ದು, ಇದಕ್ಕಾಗಿ ದರ್ಶನ್‌ ಕೂಡ ಜಾಮೀನು ಅರ್ಜಿಗೆ ಸಹಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

Tags:
error: Content is protected !!