Mysore
22
scattered clouds

Social Media

ಗುರುವಾರ, 26 ಡಿಸೆಂಬರ್ 2024
Light
Dark

ಉಪ್ಪಿ ಚಿತ್ರಕ್ಕಾಗಿ ಜೈಲಿನಿಂದ 2 ಗಂಟೆ ಪೆರೋಲ್‌ ಮೇಲೆ ಹೊರಬರಲಿದ್ದಾರೆ ದರ್ಶನ್.?‌

ಬೆಂಗಳೂರು: ರಿಯಲ್‌ ಸ್ಟಾರ್‌ ಉಪೇಂದ್ರ ಅಭಿನಯದ ʼಉಪೇಂದ್ರʼ ಚಿತ್ರದ 25 ವರ್ಷದ ಸಂಭ್ರಮಾಚರಣೆಗೆ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ರನ್ನು ಕರೆತರುವ ಬಗ್ಗೆ ಚರ್ಚೆ ಶುರುವಾಗಿದೆ.

ಸ್ವತಃ ಉಪೇಂದ್ರ ಅವರೇ ನಿರ್ದೇಶಿಸಿ ನಟಿಸಿದ್ದ ಉಪೇಂದ್ರ ಸಿನಿಮಾ ಭಾರೀ ದಾಖಲೆ ನಿರ್ಮಿಸಿತ್ತು. ಈ ಚಿತ್ರವನ್ನು ಶೀಘ್ರದಲ್ಲೇ ರಿ ರಿಲೀಸ್‌ ಮಾಡುವ ಪ್ರಯತ್ನ ನಡೆಯುತ್ತಿದ್ದು, ಅಕ್ಟೋಬರ್.‌22ಕ್ಕೆ ಸಿನಿಮಾ 25 ವರ್ಷ ಪೂರೈಸಲಿದೆ.

ಉಪೇಂದ್ರ ಸಿನಿಮಾದ 25 ವರ್ಷಗಳ ಸಂಭ್ರಮಾಚರಣೆಗೆ ಸಿದ್ಧತೆ ನಡೆಸಿದ್ದು, ಬಹಳ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ಆಯೋಜಿಸುವ ಬಗ್ಗೆ ಲೆಕ್ಕಾಚಾರ ಶುರುವಾಗಿದೆ.

ಇಡೀ ಕನ್ನಡ ಚಿತ್ರರಂಗದ ಕಲಾವಿದರು, ತಂತ್ರಜ್ಞರನ್ನು ಆಹ್ವಾನಿಸಿ ಅದ್ಧೂರಿಯಾಗಿ ಕಾರ್ಯಕ್ರಮ ಮಾಡುವ ಆಲೋಚನೆಯಲ್ಲಿದ್ದು, ದರ್ಶನ್‌ ಅವರನ್ನು ಸಹ ಕರೆತರುವ ಪ್ರಯತ್ನ ನಡೆಸಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರು ಪೆರೋಲ್‌ ಮೇಲೆ ಎರಡು ಗಂಟೆ ಜೈಲಿನಿಂದ ಹೊರಬರಲಿದ್ದಾರೆ ಎಂದು ಹೇಳಲಾಗುತ್ತಿದ್ದು, ಕೋರ್ಟ್‌ ಹಾಗೂ ಪೊಲೀಸರು ಇದಕ್ಕೆ ಅನುಮತಿ ನೀಡುತ್ತಾರಾ ಎಂಬುದನ್ನು ಕಾದುನೋಡಬೇಕಿದೆ.

 

 

Tags: