Mysore
21
overcast clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ದಸರಾ ಫಲಪುಷ್ಪ ಪ್ರದರ್ಶನ: ಕೈ ತೋಟಗಳ ಸ್ಪರ್ಧೆಗೆ ಅರ್ಜಿ ಆಹ್ವಾನ

ಮೈಸೂರು: ತೋಟಗಾರಿಕೆ ಇಲಾಖೆ ಮತ್ತು ಜಿಲ್ಲಾ ತೋಟಗಾರಿಕೆ ಸಂಘ (ರಿ), ಕರ್ಜನ್ ಪಾರ್ಕ್ ರವರ ಸಂಯುಕ್ತಾಶ್ರಯದಲ್ಲಿ 2024-25 ನೇ ಸಾಲಿನ ದಸರಾ ಫಲಪುಷ್ಪ ಪ್ರದರ್ಶನದ ಭಾಗವಾಗಿ ಮೈಸೂರು ನಗರ ವ್ಯಾಪ್ತಿಯ ಸಾರ್ವಜನಿಕ, ಖಾಸಗಿ ಮನೆ, ಕೈಗಾರಿಕೆ ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳು, ಆಡಳಿತಾಧಿಕಾರಿ ಕಛೇರಿ, ಆಸ್ಪತ್ರೆ, ಅಪಾರ್ಟ್ ಮೆಂಟ್, ಹೋಟೆಲ್ ಕೈ ತೋಟಗಳು ಸೇರಿದಂತೆ ಇತರೆ ಕೈ ತೋಟಗಳ ಸ್ಪರ್ಧೆಗೆ ಅರ್ಜಿ ಆಹ್ವಾನಿಸಲಾಗಿದೆ.

ಕರ್ಜನ್ ಪಾರ್ಕ್ ಆವರಣದಲ್ಲಿರುವ ಜಿಲ್ಲಾ ತೋಟಗಾರಿಕೆ ಸಂಘದ ಕಛೇರಿಯಲ್ಲಿ ಸೆಪ್ಟೆಂಬರ್ 02 ರಿಂದ 20 ರವರೆಗೆ ಅರ್ಜಿಗಳನ್ನು ವಿತರಿಸಲಾಗುವುದು. ಆಸಕ್ತರು ನಿಗದಿತ ಶುಲ್ಕವನ್ನು ಗೂಗಲ್ ಪೇ/ಫೋನ್ ಪೇ/ಚೆಕ್/ಡಿಡಿ/ ಅಥವಾ ಇನ್ಯಾವುದೇ ರೀತಿಯ ಇ-ಪೇಮೆಂಟ್ ಮೋಡ್ ಮೂಲಕ ಮಾತ್ರ ಶುಲ್ಕ ಪಾವತಿಸಿ ತೋಟಗಳ ಸ್ಪರ್ಧೆಗೆ ಅರ್ಜಿ ಸಲ್ಲಿಸಿ ಹೆಸರು ನೋಂದಾಯಿಸಿಕೊಳ್ಳಬಹುದು.

ಸೆಪ್ಟೆಂಬರ್ 25 ರಿಂದ 27 ರವರೆಗೆ ತೀರ್ಪುಗಾರರು ಸಂಘದ ಕಛೇರಿಯಲ್ಲಿ ನೋಂದಾಯಿಸಿಕೊಂಡ ತೋಟಗಳಿಗೆ ಭೇಟಿ ನೀಡಲಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂ: 0821-2977572 ನ್ನು ಸಂಪರ್ಕಿಸಬಹುದು ಎಂದು ಕರ್ಜನ್ ಪಾರ್ಕ್ನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಜಿಲ್ಲಾ ತೋಟಗಾರಿಕಾ ಸಂಘದ ಪದನಿಮಿತ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags: