ಹನೂರು: ತಾಲೂಕಿನ ಮಾರ್ಟಳ್ಳಿ ಗ್ರಾಮದಿಂದ ತಮಿಳುನಾಡಿಗೆ ಕಾರಿನಲ್ಲಿ ಅಕ್ರಮ ಮದ್ಯ ಸಾಗಣೆ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ರಾಮಾಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ತಮಿಳುನಾಡಿನ ಹಂದಿಯೂರು ಗ್ರಾಮದ ಕುಪ್ಪುಸ್ವಾಮಿ (53) ಬಂಧಿತ ಆರೋಪಿಯಾಗಿದ್ದಾನೆ.
ಘಟನೆ ವಿವರ: ತಾಲೂಕಿನ ಮಾರ್ಟಳ್ಳಿ ಗ್ರಾಮದಿಂದ ತಮಿಳುನಾಡಿಗೆ ಕಾರಿನಲ್ಲಿ ಅಕ್ರಮ ಮದ್ಯ ಸಾಗಣೆ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ರಾಮಾಪುರ ಪೊಲೀಸ್ ಠಾಣೆಯ ಎಸ್ ಐ ಈಶ್ವರ ಹಾಗೂ ಸಿಬ್ಬಂದಿ ವರ್ಗ ದಾಳಿ ನಡೆಸಿ ನಾಲ್ ರೋಡ್ ಸಮೀಪ ಸರಕು ಸಮೇತ ಆರೋಪಿಯನ್ನು ವಶಕ್ಕೆ ಪಡೆದು 6055 ರೂ ಮೌಲ್ಯದ ವಿವಿಧ ಕಂಪನಿಯ ಮದ್ಯದ ಪೌಚ್‌ಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ದಾಳಿಯಲ್ಲಿ ಎಎಸ್ಐ ಮಹಾದೇವ ಸ್ವಾಮಿ, ಮುಖ್ಯಪೇದೆ ಸಿದ್ದೇಶ್, ಪೇದೆ ಮಹೇಂದ್ರ, ಚಾಲಕ ಪರಮೇಶ್ ಹಾಜರಿದ್ದರು.