Mysore
71
overcast clouds

Social Media

ಮಂಗಳವಾರ, 22 ಸೆಪ್ಟೆಂಬರ್ 2026
Light
Dark

ಪಿಎಸ್‌ಐ ಪರೀಕ್ಷೆ ಮುಂದೂಡಿಕೆ ಬಗ್ಗೆ ಗೃಹ ಸಚಿವ ಪರಮೇಶ್ವರ್‌ ರಿಯಾಕ್ಷನ್‌

ಬೆಂಗಳೂರು: ಸೆಪ್ಟೆಂಬರ್.‌22ರಂದು ಯುಪಿಎಸ್‌ಸಿ ಮುಖ್ಯಪರೀಕ್ಷೆ ಇದ್ದು, ಅದೇ ದಿನ ಪಿಎಸ್‌ಐ ನೇಮಕಾತಿ ಪರೀಕ್ಷೆ ನಡೆಸಲು ಮುಂದಾಗಿರುವ ಹಿನ್ನೆಲೆಯಲ್ಲಿ ಎಲ್ಲೆಡೆ ಆಕ್ಷೇಪ ವ್ಯಕ್ತವಾಗಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಪರಮೇಶ್ವರ್‌ ಅವರು, ಪರೀಕ್ಷೆ ಮುಂದೂಡುವ ಬಗ್ಗೆ ಕೆಇಎ ಹಾಗೂ ಇಲಾಖೆಯ ಅಧಿಕಾರಿಗಳ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಪಿಎಸ್‌ಐ ಪರೀಕ್ಷೆಯನ್ನು ಬರೆಯಬೇಕಾದ ನೂರಕ್ಕೂ ಹೆಚ್ಚು ಜನ ಆಕಾಂಕ್ಷಿಗಳು ಯುಪಿಎಸ್‌ಸಿ ಪರೀಕ್ಷೆಯನ್ನು ಬರೆಯುತ್ತಿದ್ದಾರೆ.

ಹೀಗಾಗಿ ಪರೀಕ್ಷಾ ದಿನ ಮುಂದೂಡುವಂತೆ ಅನೇಕರಿಂದ ಮನವಿ ಬಂದಿದೆ. ಪರೀಕ್ಷೆ ಮುಂದೂಡುವ ಕುರಿತು ಸಾಧಕ-ಬಾಧಕಗಳನ್ನು ಇಲಾಖೆಯ ಅಧಿಕಾರಿಗಳು ಹಾಗೂ ಕೆಇಎ ಅವರೊಂದಿಗೆ ಮತ್ತೊಮ್ಮೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟನೆ ನೀಡಿದರು.

 

Tags:
error: Content is protected !!