Mysore
34
clear sky

Social Media

ಬುಧವಾರ, 22 ಏಪ್ರಿಲ 2026
Light
Dark

ನಟ ಕಿರಣ್‌ ರಾಜ್‌ ಪ್ರಯಾಣಿಸುತ್ತಿದ್ದ ಕಾರು ಅಪಘಾತ: ಎದೆ ಭಾಗಕ್ಕೆ ತೀವ್ರ ಪೆಟ್ಟು

ಬೆಂಗಳೂರು: ಕನ್ನಡ ಚಿತ್ರರಂಗದ ನಟ ಕಿರಣ್‌ ರಾಜ್‌ ಪ್ರಯಾಣಿಸುತ್ತಿದ್ದ ಕಾರು ಬೆಂಗಳೂರಿನ ಕೆಂಗೇರಿ ಬಳಿ ಅಪಘಾತವಾಗಿದೆ.

ಮುದ್ದರಾಯನ ಪಾಳ್ಯ ವೃದ್ಧಾಶ್ರಮಕ್ಕೆ ಹೋಗಿ ವಾಪಸ್‌ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಎಕ್ಸಿಕ್ಯೂಟರ್‌ ಪ್ರೊಡ್ಯೂಸರ್‌ ಗಿರೀಶ್‌ ಕಾರು ಚಾಲನೆ ಮಾಡುತ್ತಿದ್ದರು ಎನ್ನಲಾಗಿದ್ದು, ನಿಯಂತ್ರಣ ತಪ್ಪಿ ಕಂಬಕ್ಕೆ ಕಾರು ಡಿಕ್ಕಿ ಹೊಡೆದಿದೆ.

ಅಪಘಾತದ ರಭಸಕ್ಕೆ ಕಿರಣ್‌ ರಾಜ್‌ ಎದೆಯ ಭಾಗಕ್ಕೆ ತೀವ್ರ ಪೆಟ್ಟಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸದ್ಯ ಕಿರಣ್‌ ರಾಜ್‌ ಪ್ರಾಣಾಪಾಯದಿಂದ ಪಾರಾಗಿದ್ದು, ಘಟನಾ ಸ್ಥಳಕ್ಕೆ ಕೆಂಗೇರಿ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

Tags:
error: Content is protected !!