Mysore
15
clear sky

Social Media

ಬುಧವಾರ, 24 ಡಿಸೆಂಬರ್ 2025
Light
Dark

ಓದುಗರ ಪತ್ರ: ಭರವಸೆ ಮೂಡಿಸಿದ ಈಜುಪಟು ಶರಣ್ಯ

dgp murder case

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಊಗಿನ ಹಳ್ಳಿ ಗ್ರಾಮದ ಈಜುಪಟು ಎಸ್.ಶರಣ್ಯ ಆ.6ರಿಂದ ಆ.11 ವರೆಗೆ ಒಡಿಶಾದ ಭುವನೇಶ್ವರದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಈಜು ಸ್ಪರ್ಧೆಯ 4 ವಿಭಾಗಗಳಲ್ಲೂ ಚಿನ್ನದ ಪದಕ ಗಳಿಸಿಸುವ ಮೂಲಕ ದಾಖಲೆ ಸೃಷ್ಟಿಸಿದ್ದಾರೆ. ರಾಷ್ಟ್ರೀಯ ಮಟ್ಟದ ಈ ಈಜು ಸ್ಪರ್ಧೆಯ 1,500 ಮೀ., 800 ಮೀ., 400 ಮೀ., ಮತ್ತು 400×100 ಮೀ. ಫ್ರೀ ಸ್ಟೈಲ್ ವಿಭಾಗಗಳಲ್ಲಿ ಚಿನ್ನದ ಪದಕಗಳನ್ನು ಗೆದ್ದಿದ್ದಾರೆ.

ರಾಷ್ಟ್ರೀಯ ಮಟ್ಟದ ಈಜು ಸ್ಪರ್ಧೆಯಲ್ಲಿ ಸಾಧನೆಯ ಹಾದಿಯಲ್ಲಿ ಸಾಗುತ್ತಿರುವ ಇವರು ಹಿಂದೆಯೂ ಖೇಲೋ ಇಂಡಿಯಾ ಈಜು ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದಿದ್ದರು. ಸದ್ಯ ಬೆಂಗಳೂರಿನ ಕೆಂಪಾಪುರದ ಜೈನ ಹೆರಿಟೇಜ್ ಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಇವರು ಭವಿಷ್ಯದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಿ ಪದಕಗಳನ್ನು ಗೆಲ್ಲುವ ಭರವಸೆ ಮೂಡಿಸಿದ್ದಾರೆ.

-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

Tags:
error: Content is protected !!