ಬೆಂಗಳೂರು: ನಾಗಮಂಗಲದಲ್ಲಿ ಕಲ್ಲು ತೂರಾಟ ನಡೆದಿದ್ದು ಕೇವಲ ಸಣ್ಣ ಘಟನೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಲಘು ಹೇಳಿಕೆ ನೀಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಂಡ್ಯದ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಆಕಸ್ಮಿಕವಾಗಿ ಕಲ್ಲು ತೂರಾಟ ನಡೆದಿದೆ. ಇದು ಕೇವಲ ಸಣ್ಣ ಘಟನೆಯಾಗಿದ್ದು, ಕೋಮುಗಲಭೆ ಎಂದು ಹೇಳುವುದು ತಪ್ಪಾಗುತ್ತದೆ ಎಂದು ಲಘು ಹೇಳಿಕೆ ನೀಡಿದ್ದಾರೆ.
ಇನ್ನು ಮುಂದುವರಿದು ಮಾತನಾಡಿದ ಅವರು, ನಾಗಮಂಗಲದಲ್ಲಿ ಈ ಘಟನೆ ನಡೆಯಬಾರದಿತ್ತು. ಈ ಘಟನೆ ಸಣ್ಣ ಪ್ರಮಾಣದಲ್ಲಿ ಆಗಿ ಮುಗಿದಿದ್ದು, ಯಾರೂ ಕೂಡ ಗಾಯಗೊಂಡಿಲ್ಲ. ಆಕಸ್ಮಿಕವಾಗಿ ಅಲ್ಲಿ ಹೋಗುವಾಗ ಕಲ್ಲು ಹಾಕಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಸ್ತಿ ಪ್ರಚಾರ ನೀಡುವುದು ಬೇಡ ಎಂದು ಲಘುವಾಗಿ ಹೇಳಿದ್ದು, ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಆಕ್ರೋಶಕ್ಕೆ ಕಾರಣರಾಗಿದ್ದಾರೆ.