ಹೊಸದಿಲ್ಲಿ: ಭಾರತೀಯ ಕಮ್ಯುನಿಸ್ಟ್ (ಮಾರ್ಕ್ಸ್‌ವಾದ) ಪಕ್ಷದ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ (72) ಇಂದು ( ಸೆಪ್ಟೆಂಬರ್ 12 ) ನಿಧನ ಹೊಂದಿದ್ದಾರೆ.
ಶ್ವಾಸಕೋಶಕ್ಕೆ ಸಂಬಂಧಿಸಿದ ಸೋಂಕಿನಿಂದ ಬಳಲುತ್ತಿದ್ದ ಸೀತಾರಾಂ ಯೆಚೂರಿ ಅವರನ್ನು ಆಗಸ್ಟ್ 19ರಂದು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿದ್ದ ಅವರು ಚಿಕಿತ್ಸೆ ಫಲಕಾರಿಯಾಗದ ಕಾರಣ ಇಹಲೋಕ ತ್ಯಜಿಸಿದ್ದಾರೆ.