Mysore
19
overcast clouds

Social Media

ಶನಿವಾರ, 10 ಜನವರಿ 2026
Light
Dark

ಮೈಸೂರು ಮೆಡಿಕಲ್‌ ಕಾಲೇಜಿನ ಮುಖ್ಯ ಆಡಳಿತಾಧಿಕಾರಿಯಾಗಿ ರಘು ನೇಮಕ

ಹನೂರು: ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಹುದ್ದೆಗೆ ಶ್ರೀ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಈ ರಘು ರವರನ್ನು ಪ್ರಭಾರದಲ್ಲಿರಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಕೇಶವಪ್ರಸಾದ್ ಕೆ ಎಚ್ ಆದೇಶ ಹೊರಡಿಸಿದ್ದಾರೆ.

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯಾಗಿ ಕಳೆದ ಏಳು ತಿಂಗಳಿನಿಂದ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ರಘು ಎಈ ಕೆಎಎಸ್ ಹಿರಿಯ ಶ್ರೇಣಿ ರವರನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಕರ್ನಾಟಕ ನಾಗರೀಕ ಸೇವಾ ನಿಯಮಗಳ ನಿಯಮ 68ರ ಅಡಿ ಅವರು ಹೊಂದಿರುವ ಹುದ್ದೆಯ ಕರ್ತವ್ಯದ ಜೊತೆಗೆ ಮುಖ್ಯ ಆಡಳಿತಾಧಿಕಾರಿ ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಮೈಸೂರು ಕಲ್ಪಶ್ರೀ ಸಿ ರವರ ಸ್ಥಾನಕ್ಕೆ ಪ್ರಭಾರದಲ್ಲಿರಿಸಿ ಆದೇಶಿಸಿದ್ದಾರೆ.

ಈ ಆದೇಶದಿಂದ ಸ್ಥಳ ನಿರೀಕ್ಷಣೆಗೆ ಬರುವ ಅಧಿಕಾರಿಗಳು ಮುಂದಿನ ಸ್ಥಳ ನಿಯತ್ತಿಗಾಗಿ ಸಿಆಸು ಇಲಾಖೆಯಲ್ಲಿ/ ತಮ್ಮ ಮಾತೃ ಇಲಾಖೆಯಲ್ಲಿ ಕಾರ್ಯ ವರದಿ ಮಾಡಿಕೊಳ್ಳುವಂತೆ ನಿರ್ದೇಶನ ನೀಡಿದ್ದಾರೆ.

Tags:
error: Content is protected !!