Mysore
25
scattered clouds

Social Media

ಶನಿವಾರ, 21 ಡಿಸೆಂಬರ್ 2024
Light
Dark

ಬಿಜೆಪಿ ಶಾಸಕ ಮುನಿರತ್ನ ಬಂಧನ..!

ಬೆಂಗಳೂರು: ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಅವರಿಗೆ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ ಆರೋಪದಲ್ಲಿ ತಲೆ ಮರೆಸಿಕೊಂಡಿದ್ದ ಬೆಂಗಳೂರಿನ ಆರ್‌ಆರ್‌ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದಲ್ಲಿ ಅವರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೋಲಾರದಿಂದ ಆಂಧ್ರದ ಚಿತ್ತೂರಿಗೆ ತೆರಳುತ್ತಿದ್ದ ಮುನಿರತ್ನ ಅವರನ್ನು ಮೊಬೈಲ್‌ ಫೋನ್‌ ಲೊಕೇಷನ್‌ ಆಧರಿಸಿ ಪತ್ತೆ ಮಾಡಲಾಗಿತ್ತು, ಬಳಿಕ ಅವರನ್ನು ವಶಕ್ಕೆ ಪಡೆದಿದ್ದಾರೆ. ಮುನಿರತ್ನ ವಿರುದ್ಧ ಕೇಸ್‌ ದಾಖಲಾದಾಗಿನಿಂದ ಪೊಲೀಸರು ಅವರ ಮೇಲೆ ನಿಗಾ ವಹಿಸಿದ್ದರು. ಸದ್ಯ ಅವರನ್ನು ವಶಕ್ಕೆ ಪಡೆದಿರುವ ಪೊಲೀಸರು ಬೆಂಗಳೂರಿಗೆ ಕರೆತರುತ್ತಿದ್ದಾರೆ.

ಘಟನೆ ಹಿನ್ನೆಲೆ…
ಘನತ್ಯಾಜ್ಯ ವಿಲೇವಾರಿಗೆ ಗುತ್ತಿಗೆ ನೀಡಲು ರೂ.30ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು, ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ಬಿಜೆಪಿ ಶಾಸಕ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ಬೆಂಗಳೂರಿನ ವೈಯ್ಯಾಲಿಕಾವಲ್‌ ಠಾಣೆಯಲ್ಲಿ ಬಿಬಿಎಂಪಿ ಗುತ್ತಿಗೆದಾರ ಚಲುವಾರಜು ಎಫ್‌ಐಆರ್‌ ದಾಖಲಿಸಿದ್ದರು.

Tags: