Mysore
23
broken clouds

Social Media

ಶನಿವಾರ, 21 ಡಿಸೆಂಬರ್ 2024
Light
Dark

ಕಾವೇರಿ ತೀರ್ಥೋದ್ಬವಕ್ಕೆ ಮುಹೂರ್ತ ಫಿಕ್ಸ್‌

ಮಡಿಕೇರಿ: ಪ್ರತಿ ವರ್ಷದಂತೆ ಈ ವರ್ಷವು ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಪವಿತ್ರ ಕಾವೇರಿ ತೀರ್ಥೋದ್ಬವಕ್ಕೆ ಮುಹೂರ್ತ ಫಿಕ್ಸ್‌ ಆಗಿದೆ.

ತಲಕಾವೇರಿಯಲ್ಲಿ ತೀರ್ಥ ಕುಂಡಿಕೆಯಲ್ಲಿ ಅಕ್ಟೋಬರ್.‌17ರಂದು ಗುರುವಾರ ಬೆಳಿಗ್ಗೆ 7.40ಕ್ಕೆ ಸಲ್ಲುವ ಶುಭ ತುಲಾ ಲಗ್ನದಲ್ಲಿ ಕಾವೇರಿ ತೀರ್ಥ ರೂಪದಲ್ಲಿ ಉಗಮವಾಗಲಿದೆ.

ಕಾವೇರಿಯ ಉಗಮ ಸ್ಥಳ ತಲಕಾವೇರಿಯ ಪವಿತ್ರ ಕುಂಡಿಕೆಯಲ್ಲಿ ಕಾವೇರಿ ತೀರ್ಥರೂಪಿಣಿಯಾಗಿ ಉಕ್ಕಿ ಬರುತ್ತಾಳೆ ಎಂಬ ನಂಬಿಕೆಯಿದೆ.

ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ಮಾತೆ ಕಾವೇರಿ ತಾಯೊ ಜಲರೂಪದಲ್ಲಿ ದರ್ಶನ ಕೊಡುತ್ತಾಳೆ ಎಂದು ನಂಬಲಾಗುವ ಪವಿತ್ರ ತೀರ್ಥೋದ್ಭವಕ್ಕೆ ಈಗಾಗಲೇ ಎಲ್ಲಾ ಸಿದ್ಧತಾ ಕಾರ್ಯ ನಡೆಸಲಾಗುತ್ತಿದೆ.

ಅಕ್ಟೋಬರ್‌ಗೆ ಕಾಲಿಡುತ್ತಿದ್ದಂತೆಯೇ ಭಾಗಮಂಡಲ, ತಲಕಾವೇರಿಯಲ್ಲಿ ಸಂಭ್ರಮದ ವಾತಾವರಣ ನಿರ್ಮಾಣ ಆಗಲಿದ್ದು, ಕಾವೇರಿ ತೀರ್ಥೋದ್ಬವಕ್ಕೆ ರಾಜ್ಯದ ನಾನಾ ಭಾಗಗಳಿಂದ ಸಹಸ್ರಾರು ಸಾರ್ವಜನಿಕರು ಆಗಮಿಸಲಿದ್ದಾರೆ.

 

Tags: