Mysore
26
overcast clouds

Social Media

ಗುರುವಾರ, 06 ಆಗಸ್ಟ್ 2026
Light
Dark

ಮೈಸೂರಿನಲ್ಲಿ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಮಾನವ ಸರಪಳಿ

ಮೈಸೂರು: ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವದ ತಳಹದಿಯ ಮೇಲೆ ಕಟ್ಟಿರುವ ದೇಶದ ಪ್ರಜಾಪ್ರಭುತ್ವವನ್ನು ಮತ್ತಷ್ಟು ಗಟ್ಟಿಗೊಳಿಸಲು ಇಂದು ಪ್ರಜಾಪ್ರಭುತ್ವ ಮಾನವ ಸರಪಳಿ ವೇದಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಅರಮನೆಯ ಉತ್ತರ ದ್ವಾರದ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಬಳಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸುಮಾರು ಸಾವಿರಾರು ಜನರು ಭಾಗಿಯಾಗಿದ್ದರು.

ಮಾನವ ಸರಪಳಿಯಲ್ಲಿ ಭಾಗಿಯಾಗಿದ್ದವರು ಸಾಲಿನಲ್ಲಿ ನಿಂತು ನಾಡಗೀತೆ, ಮುಖ್ಯ ಅತಿಥಿಗಳಿಂದ ಭಾಷಣ, ಸಂವಿಧಾನದ ಪ್ರಸ್ತಾವ ಓದುವುದು, ಮಾನವ ಸರಪಳಿಯಲ್ಲಿ ಕೈ ಕೈ ಹಿಡಿದು ನಿಲ್ಲುವ ಕಾರ್ಯಕ್ರಮ ನಡೆಯಿತು.

ಮಾನವ ಸರಪಳಿಯಲ್ಲಿಯೇ ತಮ್ಮ ಎರಡೂ ಕೈಗಳನ್ನು ಮೇಲೆತ್ತಿ ಜೈ ಹಿಂದ್‌, ಜೈ ಕರ್ನಾಟಕ ಎಂಬ ಘೋಷಣೆ ಕೂಗಿ ಸರಪಳಿಯನ್ನು ಕಳಚುವ ಪ್ರಕ್ರಿಯೆ ನಡೆಯಿತು.

ಕಾರ್ಯಕ್ರಮದಲ್ಲಿ ಶಾಸಕ ತನ್ವೀರ್‌ ಸೇಠ್‌, ಹರೀಶ್ ಗೌಡ, ಎಸ್ಪಿ ಸೀಮಾ ಲಾಟ್ಕರ್‌, ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್‌ ರೆಡ್ಡಿ ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಿದ್ದರು.

 

Tags:
error: Content is protected !!