Mysore
13
overcast clouds

Social Media

ಮಂಗಳವಾರ, 16 ಡಿಸೆಂಬರ್ 2025
Light
Dark

ಶಾಸಕ ಮುನಿರತ್ನ ಬಂಧನ ಪ್ರಕರಣ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಚಿಕ್ಕಮಗಳೂರು: ಶಾಸಕ ಮುನಿರತ್ನ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಸಿ.ಟಿ.ರವಿ ಪ್ರತಿಕ್ರಿಯೆ ನೀಡಿದ್ದು, ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಎಂದು ಕೂಗಿದವರನ್ನು ಬಂಧಿಸಲು ಮೂರು ದಿನ ಬೇಕಾಯಿತು. ಎಫ್‌ಎಸ್‌ಎಲ್‌ ರಿಪೋರ್ಟ್‌ ಬರಲಿ ಎಂದು ಕಾದು ಕುಳಿತಿದ್ರಿ. ಮುನಿರತ್ನ ಅವರು ನನ್ನ ವಾಯ್ಸ್‌ ಅಲ್ಲ, ನಕಲು ಮಾಡಿದ್ದಾರೆ ಎಂದು ಹೇಳಿದ್ದಾರೆ. ಆದರೂ ಅವರನ್ನು ಬಂಧಿಸಲಾಗಿದೆ ಎಂದು ಕಿಡಿಕಾರಿದರು.

ಮುನಿರತ್ನ ಬಂಧನದ ಹಿಂದೆ ಮಾಜಿ ಸಂಸದ ಡಿ.ಕೆ.ಸುರೇಶ್‌ ಹಾಗೂ ಡಿಸಿಎಂ ಡಿಕೆಶಿ ಕೈವಾಡವಿದೆ ಎಂದು ಆರೋಪಿಸಿದ ಅವರು, ಎಫ್‌ಎಸ್‌ಎಲ್‌ ವರದಿ ಬರುವ ಮುನ್ನವೇ ಅರೆಸ್ಟ್ ಮಾಡುವ ಆತುರ ಏನಿತ್ತು ಎಂದು ಕಿಡಿಕಾರಿದ್ದಾರೆ.

ಸರ್ಕಾರ ಬರೀ ದ್ವೇಷದ ರಾಜಕಾರಣ ಮಾಡುತ್ತಿದೆ. ಬಿಜೆಪಿ ನಾಯಕರನ್ನು ಯಾವ ಪ್ರಕರಣದಲ್ಲಾದರೂ ಸಿಕ್ಕಿ ಹಾಕಿಸಬೇಕು ಎಂದು ಕಾದು ಕುಳಿತಿದೆ. ಅದು ಯಾವುದೇ ಕಾರಣಕ್ಕೂ ಸಾಧ್ಯವಾಗಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

 

Tags:
error: Content is protected !!