Mysore
24
overcast clouds

Social Media

ಶನಿವಾರ, 29 ಆಗಸ್ಟ್ 2026
Light
Dark

ನಾಳೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

ಕಲಬುರ್ಗಿ: ನಾಳೆ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ಕಲಬುರ್ಗಿಗೆ ಆಗಮಿಸಲಿದ್ದಾರೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ನಾಳೆ ಬೆಳಿಗ್ಗೆ ಸರ್ದಾರ್ ವಲಭಭಾಯಿ ಪಟೇಲ್ ಅವರ ಪ್ರತಿಮೆ‌ಗೆ ಮಾಲಾರ್ಪಣೆ ಮಾಡಿ ನಂತರ ಡಿಎಆರ್ ಮೈದಾನದಲ್ಲಿ‌ ಧ್ವಜಾರೋಹಣ ನೆರವೇರಿಸಿ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಬಳಿಕ ಕಲ್ಯಾಣ ಕರ್ನಾಟಕ‌ ಭಾಗದ ಜನರ ಬಹು ನಿರೀಕ್ಷೆಯ‌ಂತೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಲಬುರ್ಗಿಯಲ್ಲಿ ನಾಳೆ ಸಚಿವ ಸಂಪುಟ ಸಭೆ ನಡೆಸಲಾಗುತ್ತಿದೆ. ಈ ಭಾಗದ ಇಲಾಖಾವಾರು ಸಮಗ್ರ ಅಭಿವೃದ್ಧಿಯ ಕುರಿತು ಚರ್ಚಿಸಿ ನೀಲಿ ನಕ್ಷೆ ತಯಾರಿಸುವ ಬಗ್ಗೆಯೂ ಕೂಡಾ ನಿರ್ಧರಿಸಲಾಗುವುದು ಎಂದು ಹೇಳಿದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಗತ್ಯ ಕ್ರಮ ವಹಿಸಲಾಗುವುದು. ನಮ್ಮ ಸರ್ಕಾರ ಬಂದ ಮೇಲೆ ಈ ಬಗ್ಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈಗಾಗಲೇ ನಮ್ಮ ಇಲಾಖೆಯಲ್ಲಿಯೇ 800 ಇಂಜಿನಿಯರ್‌ ಹುದ್ದೆ ಭರ್ತಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಮುಂದಿನ ಎರಡು ವರ್ಷದಲ್ಲಿ ಕಲ್ಯಾಣ ಪಥ ಯೋಜನೆಯಡಿಯಲ್ಲಿ ನಮ್ಮ ಭಾಗದ ರಸ್ತೆಗಳ ರಿಪೇರಿ ಹಾಗೂ ಉನ್ನತಿಕರಣ ಮಾಡಲಾಗುವುದು. ಕಲಬುರಗಿ ಹಾಗೂ ಬೀದರ್ ಜಿಲ್ಲೆಯಲ್ಲಿ ನೀರಾವರಿ ಯೋಜನೆಗಳ ಬಗ್ಗೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ನಮ್ಮ ಭಾಗದ ಅಭಿವೃದ್ದಿ ವಿಚಾರದಲ್ಲಿ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಭರವಸೆ ನೀಡಿದರು.

Tags:
error: Content is protected !!