Mysore
32
few clouds

Social Media

ಶನಿವಾರ, 15 ಮಾರ್ಚ್ 2025
Light
Dark

ಜೊತೆಗಿದ್ದ ಯುವತಿಗೆ ಲೈಂಗಿಕ ಕಿರುಕುಳ: ಕೊರಿಯೋಗ್ರಾಫರ್‌ ವಿರುದ್ಧ ದೂರು ದಾಖಲು

ಮೈಸೂರು: ಬಾಲಿವುಡ್‌ನಿಂದ ಸ್ಯಾಂಡಲ್‌ವುಡ್‌ ವರೆಗೂ ಅನೇಕ ದಕ್ಷಿಣ ಭಾರತದ ಸ್ಟಾರ್‌ ನಟರಿಗೆ ಕೊರಿಯೋಗ್ರಾಫರ್‌ ಮಾಡಿರುವ ಹೆಸರಾಂತ ತೆಲುಗು ಡ್ಯಾನ್ಸ್ ಕೊರಿಯೋಗ್ರಾಫರ್‌ ವಿರುದ್ಧ ಲೈಂಗಿಕ ಆರೋಪದಡಿ ದೂರು ದಾಖಲಾಗಿದೆ.

ಹೌದು.. ಕೋರಿಯಾಗ್ರಾಫರ್ ಜಾನಿ ಮಾಸ್ಟರ್‌ ವಿರುದ್ಧ 21 ವರ್ಷದ ಯುವತಿ ಅನೇಕ ಬಾರಿ‌ ತನಗೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ಆರೋಪಿಸಿ ಸೈಬರಾಬಾದ್‌ನ ರಾಯದುರ್ಗ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ.

ಅಭಿನಯ ಚಕ್ರವರ್ತಿ ಸುದೀಪ್‌, ಪವರ್‌ ಸ್ಟಾರ್‌ ಪುನೀತ್‌ ರಾಜ್‌ ಕುಮಾರ್‌, ತೆಲುಗು ನಟರಾದ ಅಲ್ಲು ಅರ್ಜುನ್‌, ರಾಮ ಚರಣ್‌ ತೇಜ, ಜ್ಯೂನಿಯರ್‌ ಎನ್‌ಟಿಆರ್‌ ಸೇರಿದಂತೆ ಅನೇಕ ದಕ್ಷಿಣ ಭಾರತದ ಸ್ಟಾರ್‌ ನಟರಿಗೆ ನೃತ್ಯ ನಿರ್ದೇಶನ ಮಾಡಿರುವ ಹೆಸರಾಂತ ತೆಲುಗು ಡ್ಯಾನ್ಸ್‌ ಕೊರಿಯೋಗ್ರಾಫರ್‌ ಯಾವ ರೀತಿಯಲ್ಲಿ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ದೂರಿನಲ್ಲೀರುವುದೇನು…
ಸಂತ್ರಸ್ಥ ಯುವತಿಯೂ, ಅನೇಕ ಸಿನಿಮಾಗಳಲ್ಲಿ ಜಾನಿ ಅವರೊಂದಿಗೆ ಕೆಲಸ ಮಾಡಿಕೊಂಡಿರುವುದಾಗಿ ಹೇಳಿದ್ದು, ಕಳೆದ ಕೆಲವು ತಿಂಗಳಿಂದ ಲೈಂಗಿಕ ದೌರ್ಜನ್ಯವೆಸಗಿದ್ದಾರೆ. ಮುಂಬೈ, ಚೆನ್ನೈ ಹಾಗೂ ಹೈದರಾಬಾದ್‌ ಸೇರಿದಂತೆ ಇನ್ನಿತರ ವಿವಿಧ ಸ್ಥಳಗಳಲ್ಲಿ ಜೊತೆಯಾಗಿಯೇ ಚಿತ್ರೀಕರಣ ಮಾಡುವ ಸಂದರ್ಭದಲ್ಲಿ ಹಲವು ಬಾರಿ ಹಲ್ಲೆ ನಡೆಸಿರುವುದಾಗಿ ದೂರಿದ್ದಾರೆ.

ಅಲ್ಲದೆ, ಸಂತ್ರಸ್ಥೆಯೂ ಹೈದರಾಬಾದ್‌ನ ನರಸಿಂಗ್‌ಯಲ್ಲಿರುವ ತನ್ನ ಸ್ವಂತ ಮನೆಯಲ್ಲಿ ಜಾನಿ ಹಲವು ಬಾರಿ ತನ್ನನ್ನು ನಿಂದಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ರಾಯದುರ್ಗ ಪೊಲೀಸರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾನಿ ಮಾಸ್ಟರ್‌ ವಿರುದ್ದ ಭಾರತೀಯ ದಂಡ ಸಂಹಿತೆ 376 ಪ್ರಕಾರ ಆತ್ಯಾಚಾರ, ಕ್ರಿಮಿನಲ್‌ ಬೆದರಿಕೆ(506) ಹಾಗೂ ಸ್ವಯಂ ಪ್ರೇತರಿತವಾಗಿ ಅಪಮಾನ ಉಂಟು ಮಾಡುವುದು (323)ರ ಕಲಂ (2) ಮತ್ತು (n) ಅಡಿಯಲ್ಲಿ ದೂರು ದಾಖಲಿಸಿಕೊಂಡಿದ್ದಾರೆ.

Tags: