Mysore
26
broken clouds

Social Media

ಮಂಗಳವಾರ, 01 ಸೆಪ್ಟೆಂಬರ್ 2026
Light
Dark

ನಾಗಮಂಗಲ ಗಲಭೆ ವೇಳೆ ಪಾಕ್‌ ಪರ ಘೋಷಣೆ ಆರೋಪ: ಸಚಿವ ಚಲುವರಾಯಸ್ವಾಮಿ ಹೇಳಿದ್ದಿಷ್ಟು

ಮಂಡ್ಯ: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಭೆಯಲ್ಲಿ ಪಾಕ್‌ ಪರ ಘೋಷಣೆ ಕೂಗಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್‌ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಆರ್.ಅಶೋಕ್‌ ವಿರುದ್ಧ ಸಚಿವ ಚಲುವರಾಯಸ್ವಾಮಿ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ಯಾರೂ ಪಾಕ್‌ ಪರ ಘೋಷಣೆ ಕೂಗಿಲ್ಲ. ವಿಪಕ್ಷ ನಾಯಕ ಆರ್.ಅಶೋಕ್‌ ಸುಳ್ಳು ಹೇಳಿದ್ದಾರೆ. ಅಶೋಕ್‌ ಮೇಲೆಯೇ ಕ್ರಮ ತೆಗೆದುಕೊಳ್ಳಬೇಕು ಎಂದು ಕಿಡಿಕಾರಿದರು.

ಮಾತನಾಡುವಾಗ ಅಶೋಕ್‌ ಮಾತಿನಲ್ಲಿ ಸ್ವಲ್ಪ ಹಿಡಿತ ಇಟ್ಟುಕೊಂಡು ಮಾತನಾಡಬೇಕು. ಅಶೋಕ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ. ವಿಪಕ್ಷ ನಾಯಕನಾಗಿ ಸರಿಯಾಗಿ ಮಾತನಾಡೋದನ್ನು ಕಲಿಯಬೇಕು ಎಂದು ಟಾಂಗ್‌ ಕೊಟ್ಟಿದ್ದಾರೆ.

ನಾಗಮಂಗಲದಲ್ಲಿ ನಡೆದ ಗಲಭೆ ವೇಳೆ ಪಾಕ್‌ ಪರ ಘೋಷಣೆ ಕೂಗಿಲ್ಲ. ಇದೆಲ್ಲಾ ಸುಳ್ಳುಸುದ್ದಿ. ಹಾಗಾಗಿ ವಿಪಕ್ಷದವರು ಹೇಳುವುದನ್ನು ಯಾರೂ ನಂಬಬೇಡಿ ಎಂದು ಸ್ಪಷ್ಟನೆ ನೀಡಿದರು.

Tags:
error: Content is protected !!