Mysore
29
overcast clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ರಾಜ್ಯದಲ್ಲಿ ಅಪರಾಧಿಗಳ ಮೇಲುಗೈ: ಶೋಭಾ ಕರಂದ್ಲಾಜೆ ಕಳವಳ

ಬೆಂಗಳೂರು: ನಾಗಮಂಗಲ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅಪರಾಧಿಗಳ ಮೇಲುಗೈ ಆಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

ರಾಜ್ಯ ಪೊಲೀಸರು ಸತ್ವ ಕಳೆದುಕೊಂಡಿದ್ದಾರೆ. ಪೊಲೀಸರ ಕೈಯನ್ನು ರಾಜ್ಯ ಸರ್ಕಾರ ಕಟ್ಟಿ ಹಾಕಿದೆ. ಸರ್ಕಾರ ಹೇಳುವ ಕೆಲಸವನ್ನು ರಾಜ್ಯ ಪೊಲೀಸರು ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ರಾಜ್ಯದಲ್ಲಿ ದೇಶದ್ರೋಹಕ್ಕೆ ಕುಮ್ಮಕ್ಕು ಕೊಡುವ ಸರ್ಕಾರ ಅಧಿಕಾರದಲ್ಲಿದೆ ಎಂದು ಟೀಕೆ ಮಾಡಿದರು.

ಇಷ್ಟೆಲ್ಲಾ ಘಟನೆಗಳು ಆದರೂ ರಾಜ್ಯ ಸರ್ಕಾರ ಓಲೈಕೆ ರಾಜಕಾರಣ ಮಾಡುತ್ತಿದೆ. ರಾಜ್ಯದಲ್ಲಿ ದೇಶದ್ರೋಹ ಮಾಡಿದರೂ ಅಡ್ಡಿ ಇಲ್ಲ ಎಂಬಂತಾಗಿದೆ ಎಂದು ಕಿಡಿಕಾರಿದರು.

ನಾಗಮಂಗಲದಲ್ಲಿ ಗಣಪತಿಗೆ ಅವಮಾನ ಮಾಡಿದವರ ವಿರುದ್ಧ ಕ್ರಮ ಆಗಲಿ. ಗಲಭೆಗೆ ಕೇರಳದ ನಂಟು ಇದೆ. ಎನ್‌ಐಎಗೆ ತನಿಖೆ ವಹಿಸಿದರೆ ಸತ್ಯ ಹೊರಗೆ ಬರಲಿದೆ ಎಂದು ಆಗ್ರಹಿಸಿದರು.

 

Tags: