ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್.21-23ರವರೆಗೆ ಅಮೇರಿಕಾ ಪ್ರವಾಸ ಕೈಗೊಳ್ಳಲಿದ್ದಾರೆ
ಇದೇ ಪ್ರವಾಸದಲ್ಲಿ ಮೋದಿ ನ್ಯಾಯಾರ್ಕ್‌ನಲ್ಲಿ ನಡೆಯಲಿರುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪ್ರಕಟಣೆ ಹೊರಡಿಸಿರುವ ಪ್ರಕಾರ, ಅಮೇರಿಕಾ ಅಧ್ಯಕ್ಷ ಜೋ ಬೈಡನ್ ಆಯೋಜಿಸಿರುವ ಡೆಲವೇರ್‌ನ ವಿಲ್ಮಿಂಗ್ಟನ್‌ನಲ್ಲಿ ನಡೆಯಲಿರುವ ಕ್ವಾಡ್ ಸಭೆಯಲ್ಲಿ ಮೋದಿ ಭಾಗಿಯಾಗಲಿದ್ದಾರೆ.
ಈ ಸಭೆಯಲ್ಲಿ ಭಾರತದ ಅಭಿವೃದ್ಧಿ ಬಗ್ಗೆ ಸಂಪೂರ್ಣ ಚರ್ಚೆ ನಡೆಯಲಿದೆ ಎನ್ನಲಾಗಿದ್ದು, ಮುಂದಿನ ಕ್ವಾಡ್ ಶೃಂಗಸಭೆಯನ್ನು ಭಾರತ ಆಯೋಜಿಸಿದೆ.
ಶೃಂಗಸಭೆಯ ನಡುವೆ ಪ್ರಧಾನಿ ನರೇಂದ್ರ ಮೋದಿ ಹಲವಾರು ವಿಶ್ವ ನಾಯಕರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.