Mysore
25
light intensity drizzle

Social Media

ಸೋಮವಾರ, 18 ಮೇ 2026
Light
Dark

ಬಳ್ಳಾರಿ ಜೈಲಿನಲ್ಲಿ ಮತ್ತೊಂದು ಬೇಡಿಕೆಯಿಟ್ಟ ನಟ ದರ್ಶನ್‌

ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್‌ ಆಗಿರುವ ನಟ ದರ್ಶನ್‌, ಜೈಲು ಸಿಬ್ಬಂದಿ ಬಳಿ ಮತ್ತೊಂದು ಬೇಡಿಕೆ ಇಟ್ಟಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಮೂರು ತಿಂಗಳಿನಿಂದಲೂ ಜೈಲಿನಲ್ಲಿ ಕಂಬಿ ಎಣಿಸುತ್ತಿರುವ ನಟ ದರ್ಶನ್‌ ದಿನದಿಂದ ದಿನಕ್ಕೆ ಒಂದಲ್ಲಾ ಒಂದು ಕಿರಿಕ್‌ ಮಾಡುತ್ತಲೇ ಇದ್ದಾರೆ.

ಜೈಲು ಸಿಬ್ಬಂದಿಗೆ ಒಂದೊಂದೇ ಬೇಡಿಕೆ ಇಡುತ್ತಿರುವ ದರ್ಶನ್‌ ಈಗ ಚೇರ್‌ಗೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದ್ದು, ದರ್ಶನ್‌ ಬೇಡಿಕೆಗೆ ಜೈಲಾಧಿಕಾರಿಗಳು ತಣ್ಣೀರು ಎರಚಿದ್ದಾರೆ.

ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಬಿಂದಾಸ್‌ ಆಗಿ ಎಂಜಾಯ್‌ ಮಾಡುತ್ತಿದ್ದ ನಟ ದರ್ಶನ್‌, ಈಗ ಬಳ್ಳಾರಿ ಜೈಲಿನಲ್ಲಿ ಕಳೆದ ಎರಡು ದಿನದಿಂದ ತೆಪ್ಪಗಾಗಿದ್ದಾರೆ ಎನ್ನಲಾಗಿದೆ. ಬಳ್ಳಾರಿ ಜೈಲಿನಲ್ಲಿ ದರ್ಶನ್‌ಗೆ ಜೈಲಾಧಿಕಾರಿಗಳು ನಿಜ ಜೈಲು ಹೇಗಿರುತ್ತದೆ ಎಂಬುದನ್ನು ತೋರಿಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನೂ ಚೇರ್‌ ವಿಚಾರದಲ್ಲೂ ಕ್ಲಿಯರ್‌ ಆಗಿರುವ ಬಳ್ಳಾರಿ ಜೈಲಾಧಿಕಾರಿಗಳು ಯಾವುದನ್ನೂ ಮೈ ಮೇಲೆ ಎಳೆದುಕೊಳ್ಳದೇ ಕೋರ್ಟ್‌ ಅವಕಾಶ ಕೊಟ್ಟರೆ ಮಾತ್ರ ಕೊಡುತ್ತೇವೆ ಎಂಬ ನಿರ್ಧಾರಕ್ಕೆ ಬಂದಿದ್ದಾರೆ.

 

Tags:
error: Content is protected !!