Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಮೋದಿ ಐದು ವರ್ಷ ಪೂರೈಸೊದು ಡೌಟು; ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನರೇಂದ್ರ ಮೋದಿ ಈ ಬಾರಿ ಪ್ರಧಾನಿಯಾಗಿ ಐದು ವರ್ಷ ಪೂರೈಸೊದು ಡೌಟು ಎಂದು ಸಿ.ಎಂ.ಸಿದ್ದರಾಮಯ್ಯ ಹೇಳಿದರು.

ಪತ್ರಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ದೇಶದಲ್ಲಿ‌ ಆಗುತ್ತಿರುವ ರಾಜಕಾರಣದ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಮೋದಿ ಅವರು ಈ ಬಾರಿ ಪೂರ್ಣಾವಧಿ ಮುಗಿಸೋದು ಡೌಟು. ನಿತೀಶ್ ಕುಮಾರ್, ಚಂದ್ರಬಾಬು ನಾಯ್ಡು ಅವರು ಹೆಚ್ಚು ದಿನ ಕೇಂದ್ರ ಸರ್ಕಾರದ ಜೊತೆ ಇರುವುದಿಲ್ಲ ಎನ್ನಿಸುತ್ತಿದೆ ಎಂದು ಹೇಳಿದರು.

ಮುನಿರತ್ನ ವಿರುದ್ಧ ಕಾನೂನು ಕ್ರಮ
ಅಸಹ್ಯವಾಗಿ ನಾಲಗೆ ಹರಿಬಿಟ್ಟು ಮಹಿಳಾ ಸಮುದಾಯವನ್ನು, ದಲಿತ ಜನಾಂಗವನ್ನು, ಒಕ್ಕಲಿಗ ಸಮುದಾಯವನ್ನು ಅತ್ಯಂತ ಕೆಟ್ಟದಾಗಿ ಅವಹೇಳನ ಮಾಡಿರುವ BJP ಶಾಸಕ ಮುನಿರತ್ನಂ ವಿರುದ್ಧ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಬೇಕು ಎನ್ನುವ ಬೇಡಿಕೆ ಇದೆ. ಸದ್ಯ ಮುನಿರತ್ನಂ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದರು.

ಪೊಲೀಸರು ತನಿಖೆ ನಡೆಸಿದ್ದಾರೆ. ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ನ್ಯಾಯಾಲಯ ಮುನಿರತ್ನಂ ಅವರನ್ನು ಜೈಲಿಗೆ ಒಪ್ಪಿಸಿದೆ ಎಂದರು.

Tags: