Mysore
20
overcast clouds
Light
Dark

ಒಂದು ದೇಶ, ಒಂದು ಚುನಾವಣೆ ಯೋಜನೆಗೆ ಅಸಾದುದ್ದೀನ್ ಓವೈಸಿ ಕಿಡಿ

ನವದೆಹಲಿ: ಒಂದು ದೇಶ, ಒಂದು ಚುನಾವಣೆ ಯೋಜನೆಗೆ ಎಐಎಂಐಎಂ ನಾಯಕ ಅಸಾದುದ್ದೀನ್‌ ಓವೈಸಿ ಕಿಡಿಕಾರಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅಸಾದುದ್ದೀನ್‌ ಓವೈಸಿ ಅವರು, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಒಂದು ರಾಷ್ಟ್ರದ ಒಂದು ಚುನಾವಣೆಯನ್ನು ನಾನು ಸತತವಾಗಿ ವಿರೋಧಿಸಿದ್ದೇನೆ. ಅದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ಉಂಟು ಮಾಡುತ್ತದೆ.

ಇದರಿಂದ ಒಕ್ಕೂಟ ವ್ಯವಸ್ಥೆ ಸಂಪೂರ್ಣ ನಾಶವಾಗುತ್ತದೆ. ನಗರಸಭೆ, ಪುರಸಭೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಪ್ರಚಾರ ಮಾಡುವ ಅನಿವಾರ್ಯತೆ ಇದೆ. ಈ ಕಾರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್‌ ಶಾ ಅವರಿಗೆ ಮಾತ್ರ ಏಕಕಾಲಕ್ಕೆ ಚುನಾವಣೆ ನಡೆಸಬೇಕೆಂಬ ಅನಿವಾರ್ಯತೆ ಇದೆ.

ಆಗಾಗ ಚುನಾವಣೆ ನಡೆದರೆ ಪ್ರಜಾಪ್ರಭುತ್ವದ ಹೊಣೆಗಾರಿಕೆ ಹೆಚ್ಚಾಗುತ್ತದೆ ಎಂದು ಪೋಸ್ಟ್‌ ಮಾಡಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.