Mysore
26
scattered clouds

Social Media

ಸೋಮವಾರ, 30 ಡಿಸೆಂಬರ್ 2024
Light
Dark

ಇನ್ನೊಂದು ವಾರದೊಳಗೆ ಸಿಎಂ ನಿವಾಸ ಖಾಲಿ ಮಾಡಲಿರುವ ಅರವಿಂದ್‌ ಕೇಜ್ರಿವಾಲ್‌

ನವದೆಹಲಿ: ದೆಹಲಿ ಮಾಜಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರು, ಇನ್ನು ಒಂದು ವಾರದೊಳಗೆ ಸಿಎಂ ಅಧಿಕೃತ ನಿವಾಸ ಖಾಲಿ ಮಾಡಲಿದ್ದಾರೆ.

ಇದರ ಜೊತೆಗೆ ಅವರಿಗೆ ಒದಗಿಸಿದ ಎಲ್ಲಾ ಸೌಲಭ್ಯಗಳನ್ನು ಮತ್ತು ಭದ್ರತೆಯನ್ನು ತ್ಯಜಿಸಿ ಸಾಮಾನ್ಯರಲ್ಲಿ ಸಾಮಾನ್ಯರಂತೆ ಜೀವನ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಬಗ್ಗೆ ಆಪ್‌ ತನ್ನ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದು, ಪ್ರಾಮಾಣಿಕತೆ ಮತ್ತು ತ್ಯಾಗ ಮನೋಭಾವ ಹೊಂದಿರುವ ಕೇಜ್ರಿವಾಲ್‌ ತಮ್ಮ ಸಿಎಂ ನಿವಾಸ ಹಾಗೂ ತಮಗೆ ಸಿಕ್ಕಿರುವ ಎಲ್ಲಾ ಸರ್ಕಾರಿ ಸವಲತ್ತುಗಳನ್ನು ತ್ಯಜಿಸುತ್ತಾರೆ ಎಂದು ಮಾಹಿತಿ ನೀಡಿದೆ.

ಈ ಬಗ್ಗೆ ಮಾತನಾಡಿದ ಆಪ್‌ ಸಂಸದ ಸಂಜಯ್‌ ಸಿಂಗ್ ಅವರು, ಮುಂದಿನ ದಿನಗಳಲ್ಲಿ ಕೇಜ್ರಿವಾಲ್‌ ಅವರಿಗೆ ಜನ ಹೆಚ್ಚಿನ ಬಹುಮತದೊಂದಿಗೆ ಪ್ರಾಮಾಣಿಕತೆಯ ಪ್ರಮಾಣಪತ್ರ ನೀಡುತ್ತಾರೆ ಎಂಬ ಸಂಪೂರ್ಣ ನಂಬಿಕೆ ನನಗಿದೆ. ಇನ್ನೊಂದು ವಾರದೊಳಗೆ ತಮ್ಮ ಮನೆಯನ್ನು ಖಾಲಿ ಮಾಡುತ್ತಾರೆ ಎಂದು ಮಾಹಿತಿ ನೀಡಿದ್ದಾರೆ. ‌

Tags: