Mysore
19
overcast clouds

Social Media

ಶನಿವಾರ, 10 ಜನವರಿ 2026
Light
Dark

ಸ್ವಚ್ಛತೆಯನ್ನು ಕಾಪಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ತುಷಾರಮಣಿ

ಮಂಡ್ಯ: ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದ ಅಂಗವಾಗಿ ಈ ದಿನ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಸ್ವಚ್ಛತೆಯನ್ನು ಕೈಗೊಂಡಿದ್ದೇವೆ. ಸ್ವಚ್ಛತೆಯ ಕೆಲಸ ದೇವರ ಕೆಲಸವಾಗಿದೆ. ಸ್ವಚ್ಛತೆಯನ್ನು ಕಾಪಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ತುಷಾರಮಣಿ ಅವರು ತಿಳಿಸಿದರು.

ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸ್ವಚ್ಛತಾ ಹೀ ಸೇವಾ ಸಪ್ತಾಹವು ಈಗಾಗಲೇ ಪ್ರಾರಂಭವಾಗಿದ್ದು, ಅಕ್ಟೋಬರ್ 2 ರವರೆಗೆ ನಡೆಯಲಿದೆ. ಮಹಾತ್ಮಾ ಗಾಂಧೀಜಿಯವರು ಸ್ವಚ್ಛತೆಗೆ ಬಹಳ ಒತ್ತು ನೀಡಿದ್ದರು. ಆದ್ದರಿಂದ ಅವರ ಆಶಯವನ್ನು ಎತ್ತಿ ಹಿಡಿಯುವ ಮೂಲಕ ನಮ್ಮ ಪರಿಸರವನ್ನು ಸ್ವಚ್ಛ ಹಾಗೂ ಸುಂದರವಾಗಿರಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು. ಈ ನಿಟ್ಟಿನಲ್ಲಿ ನಮ್ಮ ಮನೆಯನ್ನು ಹೇಗೆ ಸ್ವಚ್ಛಗೊಳಿಸಿಕೊಳ್ಳುತ್ತಿವೋ ಹಾಗೆಯೇ ತಮ್ಮ ಕಚೇರಿಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಸ್ವಚ್ಛತೆ ಎಂಬುದು ಕೇವಲ ಒಂದು ದಿನದ ಕಾರ್ಯಕ್ರಮವಾಗದೆ ನಮ್ಮ ದಿನ ನಿತ್ಯದಲ್ಲಿ ಒಂದು ಅವಿಭಾಜ್ಯ ಅಂಗವಾಗಬೇಕು ಎಂದರು.

ಆಯುಕ್ತ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ಹಾಗೂ ಮಂಡ್ಯ ನಗರಸಭೆ ಕೃಷ್ಣಕುಮಾರ್ ಅವರು ಮಾತನಾಡಿ ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ನಗರಸಭೆ ವತಿಯಿಂದ ಸ್ವಚ್ಛತಾ ಆಂದೋಲನವನ್ನು ಸೆಪ್ಟೆಂಬರ್ 18 ರಿಂದ ಅಕ್ಟೋಬರ್ 2 ರವರೆಗೂ ಹಮ್ಮಿಕೊಳ್ಳಲಾಗಿದೆ. ಇದರ ಉದ್ದೇಶ ನಾವು ಕೆಲಸ ಮಾಡುವಂತಹ ಕಚೇರಿಗಳು ಹಾಗೂ ಶಾಲಾ ಕಾಲೇಜು ಆವರಣಗಳಲ್ಲಿ ಸ್ವಯಂ ನಾವೇ ಸ್ವಚ್ಛವಾಗಿಟ್ಟುಕೊಳ್ಳುವುದರ ಮೂಲಕ ಸ್ವಚ್ಛತೆಯನ್ನು ಕಾಪಾಡುವುದಾಗಿದೆ. ನಗರಸಭೆಯ ಎಲ್ಲಾ ಪೌರ ಕಾರ್ಮಿಕರು, ಅಧಿಕಾರಿಗಳು, ಸಿಬ್ಬಂದಿಗಳೆಲ್ಲರೂ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಳ್ಳುವ ಮೂಲಕ ಸ್ವಚ್ಛತೆಯನ್ನು ಪಾಲನೆ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಹರ್ಷ, ನಗರಸಭೆ ಪರಿಸರ ವಿಭಾಗದ ಅಭಿಯಂತರ ರುದ್ರೇಗೌಡ, ಆರೋಗ್ಯ ಪರಿವೀಕ್ಷಕ ಚೆಲುವರಾಜು, ನೆಹರು ಯುವ ಕೇಂದ್ರದ ಮುಖ್ಯ ಲೆಕ್ಕಾಧಿಕಾರಿ ರವಿಚಂದ್ರನ್ ಸೇರಿದಂತೆ ಜಿಲ್ಲಾಧಿಕಾರಿಗಳ ಕಚೇರಿಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Tags:
error: Content is protected !!