Mysore
21
overcast clouds

Social Media

ಶನಿವಾರ, 19 ಅಕ್ಟೋಬರ್ 2024
Light
Dark

ನಾಗಮಂಗಲ ಗಲಭೆ ಪೂರ್ವ ನಿಯೋಜಿತ ಕೃತ್ಯ: BJP ಸತ್ಯ ಶೋಧನಾ ಸಮಿತಿ ವರದಿ

ಬೆಂಗಳೂರು: ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣಪತಿ ವಿಸರ್ಜನೆ ವೇಳೆ ನಡೆದ ಗಲಭೆ ಸಂಬಂಧಪಟ್ಟಂತೆ ಬಿಜೆಪಿಯಿಂದ ರಚನೆಯಾಗಿದ್ದ ಸತ್ಯ ಶೋಧನಾ ಸಮಿತಿಯು ಗುರುವಾರ ಪಕ್ಷಕ್ಕೆ ತನ್ನ ವರದಿಯನ್ನು ಸಲ್ಲಿಸಿದೆ.

ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿಯಲ್ಲಿ ಸಮಿತಿಯ ಸದಸ್ಯರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರಗೆ ವರದಿ ಹಸ್ತಾಂತರಿಸಿದೆ. ಸಮಿತಿಯ ಸದಸ್ಯರಾದ ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ ನೇತೃತ್ವದಲ್ಲಿ ಮಾಜಿ ಸಚಿವರಾದ ಭೈರತಿ ಬಸವರಾಜ್, ಕೆ.ಸಿ.ನಾರಾಯಣಗೌಡ, ಬಿಜೆಪಿ ಕಾರ್ಯದರ್ಶಿ ಲಕ್ಷ್ಮಿ ಅಶ್ವಿನ್ ಗೌಡ, ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ವರದಿ ತಯಾರಿಸಿದ್ದಾರೆ.

ವರದಿಯಲ್ಲಿ ನಾಗಮಂಗಲ ಗಲಭೆಯು ಪೂರ್ವ ನಿಯೋಜಿತ ಕೃತ್ಯವಾಗಿದ್ದು, ಪೊಲೀಸ್ ಮತ್ತು ರಾಜ್ಯ ಸರ್ಕಾರದ ವೈಫಲ್ಯವೇ ಇದಕ್ಕೆ ಕಾರಣ ಎಂದು ತಿಳಿಸಿದೆ.

ವರದಿಯ ಉಲ್ಲೇಖಿತ ಅಂಶಗಳು ಹೀಗಿವೆ…..

ಬಾಂಗ್ಲಾ ದೇಶದಿಂದ ಬಂದಿರುವ ಕೆಲವು ಕಿಡಿಗೇಡಿಗಳು ಇದರಲ್ಲಿ ಶಾಮೀಲಾಗಿದ್ದಾರೆ.

ದೇಶದ್ರೋಹಿಗಳು ಗಲಭೆ ಎಬ್ಬಿಸಲು ಮುಂಚಿತವಾಗಿಯೇ ಕತ್ತಿ, ತಲ್ವಾರ್, ಪೆಟ್ರೋಲ್ ಬಾಂಬ್, ಮಾಸ್ಕ್‌  ಗಳನ್ನು ಖರೀದಿ ಮಾಡಿದ್ದಾರೆ.

ಕಳೆದ ವರ್ಷ ಇಲ್ಲಿ ಗಲಭೆ ನಡೆದಿದ್ದರೂ ಗುಪ್ತಚರ ವಿಭಾಗ ಮತ್ತು ಪೊಲೀಸರು ಯಾವುದೇ ಮುಂಜಾಗ್ರತಾ ಕ್ರಮ ತೆಗೆದುಕೊಂಡಿಲ್ಲ.

ಗಲಭೆಗೆ ರಾಜ್ಯ ಸರ್ಕಾರದ ವೈಫಲ್ಯವೂ ಪ್ರಮುಖ ಕಾರಣವಾಗಿದೆ.

ಘಟನೆ ಬಗ್ಗೆ ತಿಳಿದಿದ್ದರು ಸ್ಥಳದಲ್ಲಿ ಹೆಚ್ಚಿನ ಪೊಲೀಸ್ ನಿಯೋಜಿಸಲಿಲ್ಲ.

ಗಲಭೆಯಲ್ಲಿ ಪೊಲೀಸರಿಗೂ ಗಾಯಗಳಾಗಿವೆ.

ಗಲಭೆ ಕುರಿತು ಎನ್‌ಐಎ ತನಿಖೆ ಆಗಬೇಕು.

ಗಲಭೆಯಿಂದ ಒಟ್ಟು 2.66 ಕೋಟಿ ಮೌಲ್ಯದ ಆಸ್ತಿ ನಾಶ.

ಇದೇ ವರದಿಯನ್ನು ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಕ್ಕೂ ಸಲ್ಲಿಸಲು ಬಿಜೆಪಿ ಚಿಂತಿಸಿದೆ. ಜೊತೆಗೆ ಘಟನೆಗೆ ಕೇರಳ ಮೂಲದ ಲಿಂಕ್‌ ಬಗ್ಗೆಯೂ ಉಲ್ಲೇಖಿಸಿ ಎನ್‌ಐಎ ತನಿಖೆ ಬಗ್ಗೆ ಒತ್ತಡ ಹೇರಲಿದೆ ಎಂದು ಮೂಲಗಳು ತಿಳಿಸಿವೆ.

Tags: