Mysore
21
overcast clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಕಸ್ತೂರಿ ರಂಗನ್‌ ವರದಿ: ಕೇಂದ್ರದ ಬಳಿಗೆ ತೆರಳಲಿರುವ ಸರ್ವಪಕ್ಷ ನಿಯೋಗ

ಬೆಂಗಳೂರು: ಪಶ್ಚಿಮಘಟ್ಟ ಪರಿಸರ ಸೂಕ್ಷ್ಮವಲಯ ಪ್ರದೇಶದ ಗ್ರಾಮಗಳ ಜನರ ಅಹವಾಲು ಆಲಿಸಲು ಹೊಸ ಸಮಿತಿ ಕಳುಹಿಸಿಕೊಡುವಂತೆ ಕೋರಲು ಕೇಂದ್ರದ ಬಳಿಗೆ ಸರ್ವಪಕ್ಷಗಳ ನಿಯೋಗ ಕರೆದುಕೊಂಡು ಹೋಗಲು ನಿರ್ಧಾರ ಮಾಡಲಾಗಿದೆ.

ಅರಣ್ಯ ಸಚಿವ ಈಶ್ವರ್‌ ಖಂಡ್ರೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಸ್ತೂರಿ ರಂಗನ್‌ ವರದಿ ಅನುಷ್ಠಾನ ಕುರಿತು ಮಹತ್ವದ ಚರ್ಚೆ ನಡೆಸಲಾಗಿದೆ.

ಈ ಸಂಬಂಧ ಸೆಪ್ಟೆಂಬರ್.‌27ರಂದು ಕೇಂದ್ರಕ್ಕೆ ರಾಜ್ಯ ಸರ್ಕಾರ ತನ್ನ ಅಭಿಪ್ರಾಯ ಸಲ್ಲಿಸಲಿದ್ದು, ವರದಿ ತಿರಸ್ಕರಿಸುವುದು ಸೇರಿದಂತೆ ಮೂರು ಸಾಧ್ಯತೆಗಳನ್ನು ಒಳಗೊಂಡ ವರದಿ ಸಿದ್ಧಪಡಿಸಿ ಸಂಪುಟ ಸಭೆಯ ಮುಂದಿಡಲು ತೀರ್ಮಾನ ಮಾಡಲಾಗಿದೆ.

ಈ ಸಂಬಂಧ ಮೊದಲಿಗೆ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚಿಸಿದ ಬಳಿಕ ಸಂಪುಟದ ಮುಂದೆ ತರಲಾಗುವುದು ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ.

 

Tags: