Mysore
22
mist

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ರಾಜಕೀಯ ಲಾಭಕ್ಕಾಗಿ ಚಂದ್ರಬಾಬು ನಾಯ್ಡು ದೇವರನ್ನು ಬಳಸಿಕೊಳ್ತಿದ್ದಾರೆ: ಮಾಜಿ ಸಿಎಂ ಜಗನ್‌ ಮೋಹನ್‌ ರೆಡ್ಡಿ ಕಿಡಿ

ಹೈದರಾಬಾದ್: ತಿರುಮಲ ದೇವಸ್ಥಾನದ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಆರೋಪದ ಬೆನ್ನಲ್ಲೇ ಈಗ ಮಾಜಿ ಸಿಎಂ ಜಗನ್‌ ಮೋಹನ್‌ ರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಗ್ಗೆ ಹೇಳಿರುವ ಅವರು ಸಿಎಂ ಜಗನ್‌ ಮೋಹನ್‌ ರೆಡ್ಡಿ ರಾಜಕೀಯ ಲಾಭಕ್ಕಾಗಿ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಇದೊಂದು ರಾಜಕೀಯ ಸ್ಟಂಟ್.‌ ಅವರ ಸೂಪರ್‌ ಸಿಕ್ಸ್‌ ಏನಾಯಿತು ಎಂದು ಪ್ರಶ್ನೆ ಮಾಡಿದ್ದಾರೆ.

ತುಪ್ಪದಲ್ಲಿ ಪ್ರಾಣಿಗಳ ಕೊಬ್ಬಿನಂಶ ಆರೋಪ ಘೋರವಾಗಿದ್ದು, ಜತ್ತಿನಾದ್ಯಂತ ಇರುವ ಕೋಟ್ಯಾಂತರ ಭಕ್ತರ ಭಾವನೆಗಳೊಂದಿಗೆ ಆಟವಾಡುವುದು ನ್ಯಾಯವೇ ಎಂದು ಪ್ರಶ್ನೆ ಮಾಡಿದ್ದಾರೆ.

ಇನ್ನು ಪ್ರಯೋಗಾಲಯದ ಪರೀಕ್ಷಾ ವರದಿಗಳಲ್ಲಿ ಉಲ್ಲೇಖಿಸಲಾದ ಎಲ್ಲಾ ಮಾದರಿಗಳು, ಪರೀಕ್ಷೆಗಳು ಹಾಗೂ ಫಲಿತಾಂಶಗಳು ಎನ್‌ಡಿಎ ಸರ್ಕಾರದ ಅಡಿಯಲ್ಲಿ ನಡೆದಿದೆ ಎಂದು ಗಂಭೀರ ಆರೋಪ ಮಾಡಿದರು.

Tags: