Mysore
25
few clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಮೈಸೂರಿನಲ್ಲಿ ಅನ್ನ ಸಿನಿಮಾ ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಮೈಸೂರಿನ ಡಿಆರ್‌ಸಿ ಚಿತ್ರಮಂದಿರದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಅನ್ನ ಸಿನಿಮಾ ವೀಕ್ಷಣೆ ಮಾಡಿ ಖುಷಿಪಟ್ಟಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ ಅವರು, ನಿನ್ನೆ ಮೈಸೂರಿನ ಡಿಆರ್‌ಸಿ ಚಿತ್ರಮಂದಿರದಲ್ಲಿ ಅನ್ನ ಸಿನಿಮಾ ವೀಕ್ಷಣೆ ಮಾಡಿದ್ದೆ. ಅನ್ನ ಉಣ್ಣಲು ನನ್ನೂರಿನ ಜನ ಹಬ್ಬಕ್ಕಾಗಿ ಕಾಯುತ್ತಿದ್ದ ನನ್ನ ಬಾಲ್ಯದ ದಿನಗಳು ಈ ಸಿನಿಮಾದ ಕಥೆಯ ಮೂಲಕ ಕಣ್ಣೆದುರು ಬಂದವು. ನಾನು ಕಂಡ ಹಸಿವು, ಬಡತನಗಳು ನಾಡಿನ ಯಾರೊಬ್ಬರನ್ನು ಬಾಧಿಸದಿರಲಿ ಎಂದು 2023ರಲ್ಲಿ ಅನ್ನಭಾಗ್ಯ ಯೋಜನೆ ಜಾರಿಗೆ ಕೊಟ್ಟಿದ್ದೆ. ಚಿತ್ರದ ಕೊನೆಯಲ್ಲಿ ಈ ಯೋಜನೆಯ ಮಹತ್ವದ ಬಗ್ಗೆಯೂ ಸಿನಿಮಾ ಬೆಳಕು ಚೆಲ್ಲಿದೆ.

ಮನೋರಂಜನೆಯ ಜೊತೆಗೆ ಹಸಿವಿನ ಎದುರು ಬೇರೆಲ್ಲಾ ಸಂಬಂಧಗಳು ಹೇಗೆ ನಗಣ್ಯವೆನಿಸುತ್ತವೆ ಎಂಬ ಸಂದೇಶವನ್ನು ಒಳಗೊಂಡ ಈ ಚಿತ್ರ ಅದ್ಭುತವಾಗಿ ಮೂಡಿಬಂದಿದೆ. ಚಿತ್ರತಂಡಕ್ಕೆ ಶುಭವಾಗಲಿ, ಚಿತ್ರ ಯಶಸ್ವಿಯಾಗಿ ಮುನ್ನಡೆಯಲಿ ಎಂದು ಹಾರೈಸುತ್ತೇನೆ ಎಂದು ಪೋಸ್ಟ್‌ ಮಾಡಿದ್ದಾರೆ.

Tags: