ವಿಜಯವಾಡ: ತಿರುಪತಿ ತಿಮ್ಮಪ್ಪ ಲಡ್ಡು ವಿವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಆಂಧ್ರ ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.
ಪತ್ರದಲ್ಲಿ ಆಂಧ್ರಪ್ರದೇಶ ಸಿಎಂ ಚಂದ್ರಬಾಉ ನಾಯ್ಡು ವಿರುದ್ಧ ಆರೋಪಗಳ ಸುರಿಮಳೆಗೈದಿದ್ದು, ತಿರುಮಲ ತಿರುಪತಿ ದೇವಸ್ಥಾನದ ಪಾವಿತ್ರ್ಯತೆ, ಸಮಗ್ರತೆ ಮತ್ತು ಖ್ಯಾತಿಯನ್ನು ಸರಿಪಡಿಸಲಾಗದಂತೆ ಕಳಂತ ತರುವ ಪ್ರಯತ್ನಗಳನ್ನು ಸಿಎಂ ಚಂದ್ರಬಾಬು ನಾಯ್ಡು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಚಂದ್ರಬಾಬು ನಾಯ್ಡು ಒಬ್ಬ ರೋಗಗ್ರಸ್ಥ ಮತ್ತು ಸಳ್ಳು ಹೇಳುವುದನ್ನು ಕರಗತ ಮಾಡಿಕೊಂಡಿರುವ ವ್ಯಕ್ತಿ. ಕೋಟ್ಯಂತರ ಜನರ ನಂಬಿಕೆಗಳನ್ನು ಗಂಭೀರವಾಗಿ ಘಾಸಿಗೊಳಿಸುವಷ್ಟು ಕೆಳಮಟ್ಟಕ್ಕಿಳಿದಿದ್ದಾರೆ ಎಂದು ಕಿಡಿಕಾರಿದ್ದಾರೆ.