ವಿಜಯಪುರ: ರಾಜ್ಯದಲ್ಲಿ ಹಿಂದುಳಿದವರಿಗೆ, ದಲಿತರಿಗೆ, ಬ್ರಾಹ್ಮಣರಿಗೆ ಮತ್ತು ಲಿಂಗಾಯತರಿಗೆ ಅನ್ಯಾಯವಾಗುವುದನ್ನು ತಡೆಯುವ ನಿಟ್ಟಿನಲ್ಲಿ ಶೀಘ್ರದಲ್ಲೇ ರಾಯಣ್ಣ, ಚನ್ನಮ್ಮ ಬ್ರಿಗೇಡ್ ಅಸ್ಥಿತ್ವಕ್ಕೆ ಬರಲಿದೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಹಿಂದುಳಿದವರಿಗೆ ಅನ್ಯಾಯವಾಗುವುದನ್ನು ತಡೆಯಲು ಬ್ರಿಗೇಡ್ ಬೇಕು ಎಂದು ಅನೇಕರು ಅಪೇಕ್ಷೆ ವ್ಯಕ್ತಪಡಿಸಿದ್ದಾರೆ.
ರಾಯಣ್ಣ ಬ್ರಿಗೇಡ್ ಚಟುವಟಿಕೆ ನಿಲ್ಲಿಸುವಂತೆ ಈ ಹಿಂದೆ ಬಿಎಸ್‌ವೈ ದೂರಿನ ಮೇರೆಗೆ ಅಮಿತ್ ಶಾ ಅವರು, ನನಗೆ ಸೂಚಿಸಿದ್ದ ಕಾರಣಕ್ಕೆ ಕೈಬಿಟ್ಟಿದ್ದೆ. ಅಂದು ರಾಯಣ್ಣ ಬ್ರಿಗೇಡ್ ಸಂಘಟನೆ ಕೈಬಿಟ್ಟು ತಪ್ಪು ಮಾಡಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಜೀವನದಲ್ಲಿ ಬಿಜೆಪಿ ಬಿಟ್ಟು ಇನ್ಯಾವ ಪಕ್ಷಕ್ಕೂ ಹೋಗಲ್ಲ. ಆದರೆ ಅಪ್ಪ-ಮಕ್ಕಳ ಕಪಿಮುಷ್ಠಿಯಿಂದ ಶುದ್ಧೀಕರಣ ಆಗುವವರೆಗೂ ನಾನು ಬಿಜೆಪಿಗೆ ಹೋಗಲ್ಲ. ಬಿಜೆಪಿ ನನ್ನ ತಾಯಿ ಇದ್ದಂತೆ ಎಂದರು.